ಗೊರೂರು ಹೇಮಾವತಿ ಜಲಾಶಯದಿಂದ 10,000 ಕ್ಯೂಸೆಕ್ ನೀರು ಬಿಡುಗಡೆ

ಹಾಸನ: ಗೊರೂರು ಹೇಮಾವತಿ ಜಲಾಶಯಕ್ಕೆ ಮಳೆಯ ಪರಿಣಾಮವಾಗಿ ಒಳಹರಿವು ಹೆಚ್ಚಾಗಿದ್ದು, ಇಂದು 10,000 ಕ್ಯೂಸೆಕ್ ನೀರನ್ನು ಆರು ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ಬಿಡುಗಡೆ ಮಾಡಲಾಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 2912.50 ಅಡಿ ಆಗಿದ್ದು, ಒಳಹರಿವು 15,567 ಕ್ಯೂಸೆಕ್ ಆಗಿದೆ. ಕಳೆದ ವರ್ಷದ ಹೋಲಿಕೆಯಲ್ಲಿ ಈ ಬಾರಿ ಜಲ ಸಂಗ್ರಹ ಹೆಚ್ಚಾಗಿದೆ