ಪಯಣ ಕಾರ್ ಮ್ಯೂಸಿಯಂನಲ್ಲಿ ಯಶಸ್ವಿಯಾಗಿ ಜರುಗಿದ 11ನೇ ಅಂತಾರಾಷ್ಟ್ರೀಯ ಯೋಗದ ದಿನಾಚರಣೆ

ಯುವ ಜನಾಂಗವು ಇಂದು ಮೊಬೈಲ್, ಟಿವಿ, ಗ್ಯಾಜೆಟ್ ಸೇರಿದಂತೆ ವಿವಿಧ ಆಧುನಿಕ ಮಾಧ್ಯಮಗಳಲ್ಲಿ ಬೆರೆತು ತಮ್ಮ ಮಾನಸಿಕ ಶಾಂತಿಯನ್ನು ಕಳೆದುಕೊಳ್ಳುತ್ತಿದೆ. ಮನುಷ್ಯ ತನ್ನ ಜೀವನವನ್ನು ನಿರಂತರವಾಗಿ ಆನಂದಮಯವಾಗಿ ಶಾಂತಿಯುತವಾಗಿ ಕಳೆಯಬೇಕಾದಲ್ಲಿ ಯೋಗದ ಮೊರೆ ಹೋಗಬೇಕು ದಿನನಿತ್ಯ ನಾವು ಬೆಳಗ್ಗೆ ಮತ್ತು ಸಂಜೆ ಕೇವಲ ಅರ್ಧ ಗಂಟೆ ಕ್ರಮಬದ್ಧವಾಗಿ ಯೋಗಾಸನ ಮಾಡಿದರೆ ನಮ್ಮ ದೇಹದಲ್ಲಿ ಬದಲಾವಣೆ ಕಾಣಬಹುದು.