ಹೈದರಾಬಾದ್: ರೇವಂತ್ ರೆಡ್ಡಿ ನೇತೃತ್ವದ ತೆಲಂಗಾಣ ಸರ್ಕಾರವು ಪುರಸಭೆ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಮಸೂದೆಗಳನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಿದೆ. ಇದರೊಂದಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ ದೊರಕಲಿದೆ.
ಅದೇ ರೀತಿ, SC ಒಳ ಮೀಸಲಾತಿ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ತೆಲಂಗಾಣವೆಂಬ ಗೌರವವೂ ರಾಜ್ಯಕ್ಕೆ ಲಭಿಸಿದೆ.
