ಬೆಂಗಳೂರು, ಜೂನ್ 01: ದಕ್ಷಿಣ ಕನ್ನಡ ಸೇರಿದಂತೆ ಕೊಡಗು ಭಾಗದಲ್ಲಿ ಮುಂಗಾರು ಪೂರ್ವ ಮಳೆಗೆ ಪ್ರವಾಹ, ಭೂಕುಸಿತ ಸಂಭವಿಸುತ್ತಿರುವ ಹಿನ್ನೆಲೆ ಪಶ್ಚಿಮ ಘಟ್ಟದ ಧಾರಣ ಸಾಮರ್ಥ್ಯ ಅಧ್ಯಯನಕ್ಕೆ ಸಮಿತಿ ರಚನೆ ರಚಿಸಲಾಗಿದ್ದು, ಮೂರು ತಿಂಗಳ ಒಳಗಾಗಿ ಸಮಗ್ರ ವರದಿಯನ್ನು ಕಡತದಲ್ಲಿ ಸಲ್ಲಿಸುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ, ಅರಣ್ಯ ಖಾತೆ ಸಚಿವ ಈಶ್ವರ್ ಖಂಡ್ರೆ (Eshwar Khandre) ಸೂಚಿಸಿದ್ದಾರೆ.
ಆದೇಶದಲ್ಲೇನಿದೆ?
ಕರ್ನಾಟಕದ ಅರಣ್ಯಗಳ ಪೈಕಿ ಶೇ.60ರಷ್ಟು ಜೀವವೈವಿಧ್ಯತೆಯ ತಾಣವಾದ ಪಶ್ಚಿಮಘಟ್ಟ ಪ್ರದೇಶದಲ್ಲಿದ್ದು, ಇದು ಸಸ್ಯಸಂಕುಲ, ಪ್ರಾಣಿ ಸಂಕಲು, ಕೀಟ ಸಂಕುಲಗಳ ನೆಲೆವೀಡಾಗಿದೆ. ಮಿಗಿಲಾಗಿ ಮಾರುತಗಳನ್ನು ತಡೆದು ದೇಶಾದ್ಯಂತ ಮಳೆ ಸುರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.
