ಬೆಂಗಳೂರು : ಕರ್ನಾಟಕದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರವು ತನ್ನ ತಪ್ಪು ಮುಚ್ಚಿಟ್ಟುಕೊಳ್ಳಲು ಹಾಗೂ ಜನಾಕ್ರೋಶವನ್ನು ತಪ್ಪಿಸಿಕೊಳ್ಳಲು ನಮ್ಮ ಬಲಿಪಶುಗಳನ್ನಾಗಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಪದಾಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ.
ಕೆಎಸ್ಸಿಎ ಪದಾಧಿಕಾರಿಗಳು ಈ ಕುರಿತು ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಪೊಲೀಸರು ಪ್ರಾಥಮಿಕ ತನಿಖೆಯನ್ನೂ ನಡೆಸಿಲ್ಲ. ಸರ್ಕಾರದ ಪಾತ್ರದ ಬಗ್ಗೆ ಉಲ್ಲೇಖಿಸಿಯೇ ಇಲ್ಲ. ಏಕಾಏಕಿ ನಮ್ಮಲ್ಲರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆಂದು ಅರ್ಜಿಯಲ್ಲಿ ಹೇಳಲಾಗಿದೆ. ಹೈಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಿದ ಈ ಪ್ರಕರಣದಲ್ಲಿ ಕೆಎಸ್ಸಿಎ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ. ಶಂಕರ್, ಖಜಾಂಚಿ ಇ.ಎಸ್. ಜಯರಾಂ ಅವರ ವಿರುದ್ದ ಎಫ್ಐಆರ್ ದಾಖಲಾಗಿತ್ತು.
ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ. ದಯಾನಂದ ಸೇರಿದಂತೆ ಐವರು ಅಧಿಕಾರಿಗಳನ್ನು ಸರ್ಕಾರ ಅಮಾನತು ಮಾಡಿರುವುದು ಸರ್ಕಾರದ ವೈಫಲ್ಯ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಕೆಎಸ್ಸಿಎ ವಾದಿಸಿದೆ
