ಅರೇಹಳ್ಳಿ: ಅರೇಹಳ್ಳಿಯ ಸಮಾಜಸೇವಕ ಮತ್ತು ಕಾಂಗ್ರೆಸ್ ಮುಖಂಡರ ತುಳಸಿ ದಾಸ್ ರವರ 54ನೇ ಜನ್ಮದಿನಾಚರಣೆಯನ್ನು ಡಾ. ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.

ಆ ನಂತರ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ದೇವಸ್ಥಾನಕ್ಕೆ ಆಗಮಿಸಿದ ಭಕ್ತಾಧಿಗಳಿಗೆ ಹಾಗೂ ತುಳಸಿ ದಾಸ್ ಅಭಿಮಾನಿಗಳಿಗೆ ಪ್ರಸಾದ ವಿತರಣೆ ನಡೆಯಿತು.

ಕಾರ್ಯಕ್ರಮದಲ್ಲಿ ತುಳಸಿ ದಾಸ್ ಚಾರಿಟೇಬಲ್ ಟ್ರಸ್ಟ್ ಸದಸ್ಯರಾದ ಶಶಿಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರು, ಅಣ್ಣಪ್ಪ (ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು), ಅನಿಲ್ ಕುಮಾರ್, ಹೇಮಂತ್, ದೇವಸ್ಥಾನ ಸಮಿತಿಯ ಅಧ್ಯಕ್ಷ ಗಂಗಧರ್ ಮತ್ತು ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು.
