
ಬೆಂಗಳೂರು: ಮೈಕ್ರೋಫೈನಾನ್ಸ್ ದಬ್ಬಾಳಿಕೆ ತಡೆಗಟ್ಟುವ ಸಂಬಂಧ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆ-2025 ರ ಕರಡನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸ್ಪಷ್ಟೀಕರಣ ನೀಡಿ ಸೋಮವಾರ ರಾಜಭವನಕ್ಕೆ ಮತ್ತೆ ಕಳುಹಿಸಲಿದೆ.
ರಾಜ್ಯಪಾಲರು ಶುಕ್ರವಾರ ಸುಗ್ರೀವಾಜ್ಞೆಯ ಕರಡನ್ನು ಸರ್ಕಾರಕ್ಕೆ ಹಿಂತಿರುಗಿಸಿದ್ದರು, ಇದು ರಾಜ್ಯದ ವ್ಯವಹಾರದ ನಿರೀಕ್ಷೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ಅವರು ಹೇಳಿದ್ದರು.
ಮುಂಬರುವ ಬಜೆಟ್ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಸುಗ್ರೀವಾಜ್ಞೆಯನ್ನು ಮಂಡಿಸುವಂತೆ ಗೆಹ್ಲೋಟ್ ಸರ್ಕಾರಕ್ಕೆ ಸಲಹೆ ನೀಡಿದ್ದರು. ದಂಡ ಮತ್ತು ಶಿಕ್ಷೆ ಸೇರಿದಂತೆ ಕೆಲವು ವಿಷಯಗಳಿಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದರು.
ಪ್ರಸ್ತಾವಿತ ಸುಗ್ರೀವಾಜ್ಞೆಯು ಒಬ್ಬರ ಮೂಲಭೂತ ಹಕ್ಕನ್ನು ನಿರ್ಬಂಧಿಸುವುದಿಲ್ಲ ಮತ್ತು ಅದು ಸಾಲದಾತರ ಹಿತಾಸಕ್ತಿಯನ್ನು ನಿರ್ಲಕ್ಷಿಸಿಲ್ಲ ಮತ್ತು ಸಾಲ ವಸೂಲಾತಿಯನ್ನು ನಿರ್ಬಂಧಿಸಿಲ್ಲ ಎಂದು ಕಾನೂನು ಸಚಿವ ಎಚ್ಕೆ ಪಾಟೀಲ್ ಹೇಳಿದ್ದಾರೆ.
ಈ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಹಿಂದಿರುಗಿಸುತ್ತಾ ಆರು ಅಂಶಗಳಲ್ಲಿ ಹಲವು ವಿಯಷಗಳನ್ನು ಉಲ್ಲೇಖಿಸಿದ್ದಾರೆ. ಅವಸರದಲ್ಲಿ ಸುಗ್ರೀವಾಜ್ಞೆ ತರುವ ಬದಲು ಮಾರ್ಚ್ ನಲ್ಲಿ ನಡೆಯುವ ಬಜೆಟ್ ಅಧಿವೇಶನದಲ್ಲಿ ಇದನ್ನು ಮಂಡಿಸುವಂತೆಯೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಇದಕ್ಕೆ ಇನ್ನೂ ಒಂದು ತಿಂಗಳ ಸಮಯ ತೆಗೆದುಕೊಳ್ಳುತ್ತದೆ. ಸರ್ಕಾರವು ತುರ್ತು ಪರಿಸ್ಥಿತಿಯಲ್ಲಿ ಸುಗ್ರೀವಾಜ್ಞೆ ಮೂಲಕ ಜನರ ನೆರವಿಗೆ ಬರಬೇಕಾದ ಸಂವಿಧಾನದತ್ತ ಅವಕಾಶ ಬಳಸಿಕೊಂಡು ಸುಗ್ರೀವಾಜ್ಞೆ ಜಾರಿಗೆ ಶಿಫಾರಸ್ಸು ಮಾಡಲಾಗಿದೆ. ಈ ಕಾನೂನು ರಚಿಸಲು ರಾಜ್ಯ ಸರ್ಕಾರ ತನ್ನ ಪರಮಾಧಿಕಾರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಿದೆ ಎಂದು ಪ್ರತಿಪಾದಿಸಿದರು.
ನೋಂದಾಯಿಸದ ಅಥವಾ ಪರವಾನಗಿ ಪಡೆಯದ ಸಾಲದಾತರು ಸಾಲ ನೀಡಲು ಅಥವಾ ಸಂಯುಕ್ತ ಬಡ್ಡಿ ಅಥವಾ ದಂಡದ ಬಡ್ಡಿಯನ್ನು ವಿಧಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಅಂತಹ ಸಾಲಗಳನ್ನು ಕಾನೂನಿನ ಅಡಿಯಲ್ಲಿ ನೀಡಲಾಗುವುದಿಲ್ಲ ಮತ್ತು ಅಂತಹ ಪ್ರಕರಣಗಳನ್ನು ನ್ಯಾಯಾಲಯಗಳಲ್ಲಿಯೂ ತೆಗೆದುಕೊಳ್ಳಲಾಗುವುದಿಲ್ಲ.
ಮುಖ್ಯಮಂತ್ರಿಗಳ ಕಚೇರಿಗೆ ಕಡತ ಕಳುಹಿಸಲಾಗಿದ್ದು, ಪಾಟೀಲ್ ಅವರು ನೀಡಿದ ಸ್ಪಷ್ಟೀಕರಣಗಳನ್ನು ಸಿಎಂ ಕಚೇರಿ ಅನುಮೋದಿಸಿದೆ. ಕರಡು ಸುಗ್ರೀವಾಜ್ಞೆಯನ್ನು ಅನುಮೋದನೆಗಾಗಿ ಸೋಮವಾರ ರಾಜ್ಯಪಾಲರ ಕಚೇರಿಗೆ ಮತ್ತೆ ಕಳುಹಿಸುತ್ತಿರುವುದಾಗಿ ಪಾಟೀಲರ ಕಚೇರಿ ಮೂಲಗಳು ತಿಳಿಸಿವೆ.