ಕೆ.ಆರ್.ಪೇಟೆ: ತಾಲೂಕಿನ ಕಸಬಾ ಹೋಬಳಿಯ ಹೆಗ್ಗಡಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗುತಿದೆ.
18ರ ಬುಧವಾರ ರಾತ್ರಿಯಿಂದ ಎರಡು ದಿನಗಳ ಕಾಲ ನಡೆಯುವ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮದ ವೇಳೆ ವಿವಿಧ ಪೂಜಾ ವಿಧಿ ವಿಧಾನಗಳು ಕಳಶ ಸ್ಥಾಪನೆ, ಅಭಿಷೇಕ, ಕಲಾಕರ್ಷಣೆ, ದುರ್ಗಾ ಹೋಮ, ಪಂಚಬ್ರಹ್ಮ ಹೋಮ, ಪೂರ್ಣಾಹುತಿ, ಮಹಾಮಂಗಳಾರತಿ ಜತೆಗೆ ಪ್ರಸಾದ ವಿತರಣೆ ನೆರವೇರಿತು. ಗ್ರಾಮದ ಮಹಿಳೆಯರು ಪೂರ್ಣಕುಂಭ ಕಳಸದೊಂದಿಗೆ ಸಾಂಸ್ಕೃತಿಕ ಕಲಾ ತಂಡಗ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಕೈಗೊಂಡು ದೇವಾಲಯಕ್ಕೆ ಕರೆತರಲಾಗುವುದು. ಜೂನ್ 20ರಂದು ನಾಳೆ ನೂತನ ದೇವಾಲಯ ಉದ್ಘಾಟನಾ ಸಮಾರಂಭಕ್ಕೆ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ ಪೀಠಾಧ್ಯಕ್ಷರಾದ ಶ್ರೀ ಡಾ: ನಿರ್ಮಲಂದನಾಥ ಸ್ವಾಮೀಜಿ ಹಾಗೂ ಕೆಂಗೇರಿ ಒಕ್ಕಲಿಗ ಮಹಾ
ಸಂಸ್ಥಾನ ಮಠ ಪೀಠಾಧ್ಯಕ್ಷರಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.ಪ್ರತಿಷ್ಠಾಪನೆ ಹಾಗೂ ಪೂಜಾ ಕಾರ್ಯ ಕ್ರಮವನ್ನು ವೇದಬ್ರಹ್ಮ ಗೋಪಾಲಕೃಷ್ಣ ಅವಧಾನಿ ತಂಡ ಪೂಜಾ ವಿಧಿ ವಿಧಾನಗಳನ್ನು ನೆರವೇರುತ್ತಿದೆ. ಬುಧವಾರ ರಾತ್ರಿಯಿಂದ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಈ ಸಂದರ್ಭದಲ್ಲಿ ಹೆಗ್ಗಡಹಳ್ಳಿ ಗ್ರಾಮದ ಹಿರಿಯ ಯಜಮಾನರು,ಗ್ರಾ.ಪಂ ಸದಸ್ಯರು, ಹಿರಿಯ ಹಾಗೂ ಯುವ ಮುಖಂಡರು,ಶ್ರೀ ಆಂಜನೇಯ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ಭಾಗವಹಿಸಿ ಭಗವಂತನ ದರ್ಶನ ಪಡೆದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
