ಹಾಸನ, ಜೂನ್ 25: ಜಿಲ್ಲೆಯಲ್ಲಿ ಮುಂದುವರೆದ ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಸನ,ಆಲೂರು, ಸಕಲೇಶಪುರ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರು ಈ ಕುರಿತು ಆದೇಶ ಹೊರಡಿಸಿದ್ದು, ತೀವ್ರ ಮಳೆಯ ಕಾರಣ ಮಕ್ಕಳ ಸುರಕ್ಷತೆಯನ್ನು ಪರಿಗಣಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳ ಹಾಜರಾತಿ ಸ್ಥಗಿತಗೊಳಿಸಲಾಗಿದೆ.
ಈಗಾಗಲೇ ಜೂನ್ 25ರಂದು ಹಾಸನ,ಆಲೂರು, ಸಕಲೇಶಪುರ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲ್ಲೂಕುಗಳಲ್ಲಿ ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿತ್ತು. ಮುಂದುವರಿದ ಭಾರಿ ಮಳೆಗೆ ಕಾರಣವಾಗಿ ನಾಳೆ (ಜೂನ್ 26) ಹಾಸನ,ಆಲೂರು, ಸಕಲೇಶಪುರ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲ್ಲೂಕುಗಳಿಗೂ ಇದೇ ಆದೇಶ ಅನ್ವಯವಾಗಲಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಜಿಲ್ಲಾಡಳಿತ ಸಾರ್ವಜನಿಕರಿಗೆ ಅನಾವಶ್ಯಕವಾಗಿ ಹೊರಗೆ ಹೋಗದಂತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ವಿನಂತಿಸಿದೆ.

