ಕೆ.ಆರ್.ಪೇಟೆ: ಪಟ್ಟಣದಲ್ಲಿರುವ ನ್ಯೂ ಅಪೂರ್ವ ಸೂಪರ್ ಸ್ಪೆಷಲ್ ಆಸ್ಪತ್ರೆಯಲ್ಲಿ ನೂತನ ಡಯಾಲಿಸಿಸ್ ಕೇಂದ್ರವನ್ನು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಉದ್ಘಾಟಿಸಿದರು.
ನಂತರ ಮಾತಮಾಡಿದ ಅವರು ಯುವ ಉದ್ಯಮಿ ಅನಿಲ್ ಮಾಲಿಕತ್ವದಲ್ಲಿ ಅಪೂರ್ವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯು ಅತ್ಯಾಧುನಿಕ ತಂತ್ರಜ್ಞಾನದ ಸೌಲಭ್ಯಗಳ ಮೂಲಕ ಕೆ.ಆರ್.ಪೇಟೆ ತಾಲ್ಲೂಕಿನ ಜನರ ಹಿತಕ್ಕಾಗಿ ಗ್ರಾಮೀಣ ಜನತೆ ಆರೋಗ್ಯ ಸಂವರ್ಧನೆಗೆ ಅತಿ ಅಗತ್ಯವಾಗಿ ಬೇಕಾಗಿರುವ ಡಯಾಲಿಸಿಸ್ ಘಟಕವನ್ನು ಆರಂಭಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ತಾಲೂಕಿನಲ್ಲಿ ಮೂತ್ರಕೋಶದ ತೊಂದರೆಯಿಂದ ಬಳಲುತ್ತಿರುವ ರೋಗಿಗಳಿಗೆ ಈ ಆಸ್ಪತ್ರೆ ಹೆಚ್ಚು ಅನುಕೂಲವಾಗಿದೆ.

ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ ಆದರೂ ಅವರ ಉಳಿವಿಗಾಗಿ ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಈ ಆಸ್ಪತ್ರೆ ಖಾಸಗಿಯಾದರೂ ಬಡವರಿಗೆ ಮಾತ್ರ ಕೈಗೆಎಟುಕುವ ದರದಲ್ಲಿ ಚಿಕಿತ್ಸೆ ನೀಡಿ ಉತ್ತಮ ಆರೋಗ್ಯವಂತ ಸಮಾಜಕ್ಕಾಗಿ ಸಹಕಾರಿಯಾಗಲಿ ಎಂದು ಮಂಡ್ಯ ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.
ಈ ಸಂದರ್ಭದಲ್ಲಿ ನ್ಯೂ ಅಪೂರ್ವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ಕಿರಣ್, ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಬಿ.ಸುಮಾರಾಣಿ, ಆನಂದೇಗೌಡ, ತಜ್ಞ ವೈದ್ಯರಾದ ಡಾ. ನಿರೂಪರಾಜ್, ಡಾ.ಪ್ರಜ್ವಲ್, ಡಾ.ಚಿರಾಗ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಜಿತ್, ಪುರಸಭೆ ಸದಸ್ಯ ಕೆ.ಎಸ್. ಪ್ರಮೋದ್ ಕುಮಾರ್, ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಅಪೂರ್ವ ಅನಿಲ್, ಆಡಳಿತಾಧಿಕಾರಿ ಅವಿನಾಶ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಸೇರಿದಂತೆ ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
