
ಹೊಳೆನರಸೀಪುರ: ಡಿವೈಎಸ್ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿ. ಅಶೋಕ್ (54) ಅವರು ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಪಡೆಯುತ್ತಿದ್ದರೂ ವೈದ್ಯಕೀಯ ಪ್ರಯತ್ನಗಳಿಗೆ ಸ್ಪಂದಿಸದೆ ಬೆಂಗಳೂರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ರಾಜ್ಯ ಪ್ರಶಸ್ತಿ ವಿಜೇತ ಪೊಲೀಸ್ ಅಧಿಕಾರಿ ಡಿ. ಅಶೋಕ್ ಅವರು ತಮ್ಮ ಸೇವಾ ಅವಧಿಯಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು. 2022ರಲ್ಲಿ ರಾಷ್ಟ್ರಪತಿ ಪದಕ ಹಾಗೂ 2023ರಲ್ಲಿ ಕೇಂದ್ರ ಗೃಹ ಸಚಿವರ ಪದಕಕ್ಕೆ ಭಾಜನರಾಗಿದ್ದರು.
ಭದ್ರಾವತಿ ಮೂಲದ ಅಶೋಕ್ ಅವರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. .
ಇಂದು ಸಂಜೆ 3 – 4.00 ಸಮಯದಲ್ಲಿ ಅವರ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆ. ಅವರ ಅಗಲಿಕೆಗೆ ಹಾಸನ ಎಸ್ಪಿ ಮಹಮದ್ ಸುಜೀತಾ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.