ಬೆಂಗಳೂರು, ಜುಲೈ 18: ಧರ್ಮಸ್ಥಳ ಪ್ರಕರಣದ ಹಿನ್ನೆಲೆಯಲ್ಲಿ ಹಿರಿಯ ವಕೀಲರಾದ ಬಾಲನ್ ಮತ್ತು ಸಿ.ಎಸ್. ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗ ಇಂದು ಸಿಎಂ ಭೇಟಿಯಾಗಿ, ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಕೀಲರು ಪ್ರಕರಣದ ಗಂಭೀರತೆಯನ್ನು ವಿವರಿಸಿ, ಪೀಡಿತರಿಗೆ ನ್ಯಾಯ ಸಿಗಲೆಂದು ರಾಜ್ಯ ಸರ್ಕಾರದಿಂದ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಕುರಿತಂತೆ ಮುಂದಿನ ಹಂತಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ಸಿಎಂ ನೀಡಿದರು.

[…] […]