ನವದೆಹಲಿ, ಜುಲೈ 25: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) ಭಾರತದ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು ತಲುಪಿದ್ದಾರೆ. ಸತತವಾಗಿ 4,078 ದಿನಗಳ ಕಾಲ ಪ್ರಧಾನಿಯ ಹುದ್ದೆ ಅಲಂಕರಿಸಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿಯ 4,077 ದಿನಗಳ ದಾಖಲೆವನ್ನು ಮೀರಿಸಿ ದೇಶದ ದ್ವಿತೀಯ ಅತೀ ದೀರ್ಘಾವಧಿಯ ಪ್ರಧಾನಿಯಾಗಿ ಹೆಸರಾಗಿದ್ದಾರೆ.
ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು 6,130 ದಿನಗಳ ಅವಧಿಗೆ ಸೇವೆ ಸಲ್ಲಿಸಿದ್ದು, ಈ ಪಟ್ಟಿಯಲ್ಲಿ ಪ್ರಥಮ ಸ್ಥಾನದಲ್ಲಿದ್ದಾರೆ. ಮೋದಿ ಅವರು 2014ರಲ್ಲಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ 2019 ಮತ್ತು 2024ರ ಲೋಕಸಭಾ ಚುನಾವಣೆಗಳಲ್ಲಿ ಬೃಹತ್ ಗೆಲುವು ಸಾಧಿಸಿ ಸತತವಾಗಿ ಮೂರು ಅವಧಿಗೆ ಅಧಿಕಾರದಲ್ಲಿದ್ದಾರೆ.
ಪ್ರಧಾನಿಯಾಗಿ ನೇಮಕಗೊಳ್ಳುವ ಮೊದಲು ಅವರು 2001ರಿಂದ 2014ರವರೆಗೆ ಗುಜರಾತ್ ರಾಜ್ಯದ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ಮೋದಿಯವರು ಸ್ವಾತಂತ್ರ್ಯ ನಂತರ ಜನಿಸಿದ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರದ ಅತ್ಯಂತ ದೀರ್ಘಾವಧಿಯ ಪ್ರಧಾನಿಯಾಗಿ ಗುರುತಿಸಲ್ಪಟ್ಟಿದ್ದಾರೆ.
ವಯಸ್ಸಾದ ಪೋಷಕರ ಆರೈಕೆಗೆ 30 ದಿನಗಳ ರಜೆ: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ

[…] […]
[…] […]