ಕೆ.ಆರ್.ಪೇಟೆ: ಯುವಕ ಯುವತಿಯರು ದುಶ್ಚಟಗಳಿಂದ ಮುಕ್ತಗೊಳಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ದುಶ್ಚಟದ ವಿರುದ್ಧ ಅರಿವು ಮೂಡಿಸುವ ಸಲುವಾಗಿ ಶ್ರೀ ಧರ್ಮಸ್ಥಳ ಸಂಸ್ಥೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರು ಹಾಗೂ ಸಮಾಜ ಸೇವಕರಾದ ಆರ್.ಟಿ.ಓ ಮಲ್ಲಿಕಾರ್ಜುನ್ ತಿಳಿಸಿದರು.
ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಲ್ಲೇನಹಳ್ಳಿ ಸರ್ಕಾರಿ ಪ್ರೌಢಶಾಲಾ ಹಾಗೂ ಕಾಲೇಜಿನಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಏರ್ಪಡಿಸಿದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸರ್ಕಾರಗಳು ಎಷ್ಟೇ ಕಟ್ಟು ನಿಟ್ಟಿನ ಶಿಸ್ತು ಕ್ರಮ ಕೈಗೊಂಡರು ಕೂಡ ಅಂತರಾಷ್ಟ್ರೀಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮದಕ ವಸ್ತುಜಾಲ ಹೆಚ್ಚಾಗುತ್ತಿದೆ.ಸುಮಾರು 16 ವರ್ಷಗಳ ಮಕ್ಕಳಿಂದ ಹಿಡಿದು ರ 34 ವರ್ಷಗಳ ವಯಸ್ಕರು ಮಾದಕ ವಸ್ತಗಳಿಗೆ ಬಲಿಯಾಗುತ್ತಿದ್ದಾರೆ. ಮದ್ಯವ್ಯಸನ, ಗುಟ್ಕಾ, ಧೂಮಪಾನಗಳಿಂದ ಯುವ ಜನತೆಯ ಜೀವನ ಹಾಳಾಗುತ್ತಿದೆ.
ಸಹವಾಸ ದೋಷ, ಆಕಸ್ಮಿಕ ಆಕರ್ಷಣೆಗಳ ಕಾರಣ ದುಶ್ಚಟ ಒಮ್ಮೆ ಆರಂಭವಾದರೆ ಬದುಕು ವಿನಾಶದ ಹಾದಿಯಲ್ಲಿ ಸಾಗುತ್ತದೆ ಇದರಿಂದ ವೈಯಕ್ತಿಕ ಜೀವನದ ಜೊತೆ ಜೊತೆಗೆ ಸಮಾಜದ ಸ್ವಾಸ್ಥ್ಯ ಸಹ ಹಾಳಾಗುತ್ತದೆ ಎಂದು ಅವರು ವಿದ್ಯಾರ್ಥಿ ಜೀವನದ ದೆಸೆಯಿಂದಲೇ ಉತ್ತಮ ಕ್ರಿಯಾಶೀಲ ಹವ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಸಮಾಜ ಕಟ್ಟುವ ಕಾರ್ಯಕ್ರಮಕ್ಕೆ ದೃಢ ಸಂಕಲ್ಪ ಕೈಗೊಳ್ಳಬೇಕು.ದುಶ್ವಟಕ್ಕೆ ದಾಸರಾಗಿರುವ ವ್ಯಕ್ತಿಗಳನ್ನು ಬದಲಾವಣೆ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶ, ಪ್ರಸ್ತುತ ಯುವ ಜನತೆ ಸಂಸ್ಕಾರ ಕಲಿಯಿರಿ ಹಿರಿಯರಿಗೆ ಗೌರವ ನೀಡಿ ಉತ್ತಮ ಮಾನವೀಯ ಮೌಲ್ಯಗಳನ್ನು ಕಲಿತುಕೊಳ್ಳಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಆರ್.ಟಿ.ಓ ಮಲ್ಲಿಕಾರ್ಜುನ್ ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಸಿ.ಆರ್.ಪಿ ಮಹೇಶ್ ಸದೃಢ ಸಮಾಜಕ್ಕೆ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳು ಮೊದಲು ದುಶ್ಚಟಗಳಿಂದ ದೂರವಿದ್ದು ಶಿಕ್ಷಣದ ಕಡೆದ ಹೆಚ್ಚು ಗಮನ ಹರಿಸಬೇಕು.ಯುವಕರು ದುಶ್ಚಟಗಳಿಗೆ ಬಲಿಯಾಗದಂತೆ ತಡೆಯಲು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಶ್ಲಾಘನೀಯ.ಮೊಬೈಲ್ ಕೂಡ ಯುವಕರನ್ನು ಹಾಳು ಮಾಡುತ್ತಿದೆ ಉತ್ತಮ ಸಂಕಲ್ಪ ಮಾಡಿ ಆರೋಗ್ಯವಂತ ಸಮಾಜ ನಿರ್ಮಿಸಲು ಎಲ್ಲರೂ ಕೈಜೋಡಿಸಬೇಕು ಅಪರೂಪದ ಮನಷ್ಯನ ಜೀವನವನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಶಾಲಾ ಮುಖ್ಯ ಶಿಕ್ಷಕ ಶಿವಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ನಶೆಯಿಂದ ನರಕ ಎಂಬ ಕಿರು ಚಿತ್ರದ ಮೂಲಕ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ.ಮಾದಕ ವಸ್ತುಗಳ ಸೇವನೆಯ ವಿರುದ್ಧ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಸಂಘದ ತಾಲ್ಲೂಕು ಯೋಜನಾಧಿಕಾರಿ ತಿಲಕ್ ರಾಜ್, ಶಾಲಾ ಮುಖ್ಯ ಶಿಕ್ಷಕ ಶಿವಣ್ಣ,ಬಲ್ಲೇನಹಳ್ಳಿ ಸರ್ಕಾರಿ ಕಾಲೇಜು ಪ್ರಾಂಶುಪಾಲ ರಾಜೇಗೌಡ, ಗ್ರಾ.ಪಂ ಅಧ್ಯಕ್ಷೆ ಸೌಮ್ಯ, ಹಿರಿಯ ಪತ್ರಕರ್ತ ಶ್ರೀನಿವಾಸ್,ಸಂಘದ ಮೇಲ್ವಿಚಾರಕ ಪ್ರಕಾಶ್, ಸೇವಾಪ್ರತಿನಿಧಿಗಳಾದ ದೀಪಿಕಾ, ರೇಖಾ, ಶಾಲಾ ಶಿಕ್ಷಕ ವೃಂದ ವಿದ್ಯಾರ್ಥಿಗಳು ಸೇರಿದಂತೆ ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
