ಕೆ.ಆರ್.ಪೇಟೆ,ಜು.28: ತಾಲ್ಲೂಕಿನ ವಿಠಲಾಪುರ ಗ್ರಾಮ ಪಂಚಾಯಿತಿ ಮಟ್ಟದ ತ್ರೈ ಮಾಸಿಕ ಕೆಡಿಪಿ ಸಭೆಯು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಅಧ್ಯಕ್ಷ ಕಾಳೇಗೌಡನಕೊಪ್ಪಲು ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಬಳಿಕ ಮಾತನಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಳೇಗೌಡನಕೊಪ್ಪಲು ಕುಮಾರ್ ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಪ್ರಗತಿಯ ಬಗ್ಗೆ ವರದಿಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುವ ಕೆಡಿಪಿ ಸಭೆಯಲ್ಲಿ ಮಂಡಿಸಬೇಕು. ಗ್ರಾಮ ಪಂಚಾಯಿತಿ ಆಡಳಿತವನ್ನು ಸರ್ಕಾರವು ಸ್ಥಳೀಯ ಸರ್ಕಾರ ಎಂದು ಘೋಷಣೆ ಮಾಡಿದೆ. ಅಲ್ಲದೆ ಪ್ರತಿ 3 ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನೆ ಮಾಡಿ ಕೆಲಸ ಮಾಡದ ಅಧಿಕಾರಿಗಳನ್ನು ಎಚ್ಚರಿಸಲು ಕೆಡಿಪಿ ಸಭೆಯನ್ನು ನಡೆಸಲಾಗುತ್ತಿದೆ. ಕೆಡಿಪಿ ಸಭೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು, ಆಸ್ಪತ್ರೆಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿದ್ಯುತ್ ಇಲಾಖೆಯ ಅಧಿಕಾರಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳ ಮುಖ್ಯಸ್ಥರು ಭಾಗವಹಿಸಿ ತಮ್ಮ, ತಮ್ಮ ಇಲಾಖೆಯ ಪ್ರಗತಿಯ ವರದಿಯನ್ನು ಮಂಡಿಸಬೇಕು ಎಂದು ಅಧ್ಯಕ್ಷ ಕುಮಾರ್ ಸಲಹೆ ನೀಡಿದರು.

ತಾಲ್ಲೂಕು ಪಂಚಾಯತ್(ಪ್ಲಾನಿಂಗ್ ಆಫೀಸರ್) ತಾಲ್ಲೂಕು ಯೋಜನಾಧಿಕಾರಿ ಶ್ರೀನಿವಾಸ್ ಮಾತನಾಡಿ ಗ್ರಾಮ ಪಂಚಾಯತ್ ವತಿಯಿಂದ ಸಿಗುವ ಸೌಲಭ್ಯಗಳನ್ನು ತಿಳಿಸುತ್ತಾ, ಗ್ರಾಮಗಳ ಸಮಗ್ರ ಅಭಿವೃದ್ಧಿ ಗೆ ಉದ್ಯೋಗ ಖಾತ್ರಿ ಯೋಜನೆಯು ವರದಾನವಾದ ಯೋಜನೆಯಾಗಿದೆ ಈ ಯೋಜನೆ ಮೂಲಕ ಜಾನುವಾರು ಕೊಟ್ಡಿಗೆ, ಚೆಕ್ ಡ್ಯಾಂ ನಿರ್ಮಾಣ, ರೈತರ ಹೊಲಗದ್ದೆಗಳಿಗೆ ಹೋಗುವ ಬಂಡಿ ರಸ್ತೆಗಳ ನಿರ್ಮಾಣ, ಕೃಷಿ ಅರಣ್ಯ ಯೋಜನೆ ಕಾರ್ಯಕ್ರಮಗಳನ್ನು ಕೈಗೊಳ್ಳಬಹುದಾಗಿದೆ ಹಾಗಾಗಿ ಜಾಬ್ ಕಾರ್ಡ್ ಮಾಡಿಸಿಕೊಂಡು ವರ್ಷಕ್ಕೆ 100ದಿನಗಳ ಉದ್ಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ವಿಠಲಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಎಸ್.ರವಿಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿ ಸಭೆಯ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಮೋದೂರು ಶ್ರೀನಿವಾಸ್, ಗ್ರಾ.ಪಂ.ಸದಸ್ಯರಾದ ಕುಮಾರ್, ಸಂತೋಷ್, ಮಂಜುಳಮ್ಮ, ಪಿಡಿಓ ಹೆಚ್.ಎಸ್.ರವಿಕುಮಾರ್, ವಿಠಲಾಪುರ ವಿ.ಎಸ್.ಎಸ್.ಎನ್.ಬ್ಯಾಂಕ್ ಉಪಾಧ್ಯಕ್ಷ ಸುರೇಶ್, ವಿಠಲಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಲ್ಲಿಕಾರ್ಜುನ್, ವಿಠಲಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೆ.ಪಿ.ಶಂಕರ್, ಸಹ ಶಿಕ್ಷಕರಾದ ಯೋಗೇಶ್, ರಾಮಕೃಷ್ಣನಾಯಕ್, ಮಹೇಶ್, ತೇಜಸ್ವಿನಿ, ಸುಚಿತ್ರ, ಮಮತ, ಎಸ್.ಡಿ.ಸಿ ರಮೇಶ್, ಉಪನ್ಯಾಸಕರಾದ ಮೂರ್ತಿ, ಕುಮಾರ್, ನವೀನ್, ಶಿವರಾಜ್, ಮಮತ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ-ಕಾಲೇಜುಗಳ ಮುಖ್ಯಸ್ಥರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
- ಶ್ರೀನಿವಾಸ್ ಆರ್.
