ಹಾಸನ: ಹಾಸನ ನಗರದ ಚನ್ನಪಟ್ಟಣ ಹೌಸಿಂಗ್ ಬೋರ್ಡ್ನಲ್ಲಿರುವ “ಗುಡ್ ಸಿಟಿಜನ್ ಕಾಲೇಜು”ದ ಪದವಿ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮವನ್ನು ರೋಟರಿ ಕ್ಲಬ್ ಹಾಸನ್ ಸನ್ ರೈಸ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಹಾಸನ್, ಹಾಗೂ ಹಾಸನಾಂಬ ಲಯನ್ಸ್ ಕ್ಲಬ್ ಇವರುಗಳ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು.

ಕ್ಲಬ್ನ ಅಧ್ಯಕ್ಷರಾದ ರೋ. ಎಚ್.ಡಿ. ವಜ್ರಕುಮಾರ್ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ನೀಡಿದರು. ನಂತರ ಎಸ್.ಎಸ್. ಪಾಷ ಅವರು ರಸ್ತೆ ಸುರಕ್ಷತೆಯ ಮಹತ್ವ ಹಾಗೂ ನಿಯಮಗಳ ಕುರಿತು ಪ್ರಭಾವಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭರತ್, ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಕೆ. ಮೋಹನ್ ಕುಮಾರ್, ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷ ಕೆ.ಎಸ್. ರವಿ ಉಪಸ್ಥಿತರಿದ್ದರು. ಪ್ರತಿಯೊಬ್ಬರೂ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಅತಿಥಿ ಭಾಷಣಗಳನ್ನು ನೀಡಿದರು.

ಪದವಿ ಕಾಲೇಜಿನ ಪ್ರಾಂಶುಪಾಲ ಕಾಂತರಾಜ್ ಅಧ್ಯಕ್ಷತೆ ವಹಿಸಿ ಮುಖ್ಯ ಭಾಷಣ ನೀಡಿದರು. ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಹೇಮಂತ್ ಕುಮಾರ್, ಕ್ಲಬ್ ಕಾರ್ಯದರ್ಶಿ ರೋ. ಕೆ.ಎಸ್. ಯೋಗೇಶ್, ಸದಸ್ಯರು ರೋ. ದರ್ಶನ್ ಮತ್ತು ರೋ. ರಾಜೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಸುಮಾರು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ರಸ್ತೆ ಸುರಕ್ಷತೆ ಕುರಿತು ಅರಿವನ್ನು ಪಡೆದುಕೊಂಡರು.

ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗೆ ಸಹಕರಿಸಿದ ಎಲ್ಲರಿಗೂ ಆಯೋಜಕರು ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದರು.

