ಹಾಸನ: ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರನ್ನು ವಾಪಸ್ ಸಚಿವ ಸಂಪುಟಕ್ಕೆ ಸೇರಿಸಬೇಕೆಂದು ದಲಿತ ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ. ಇಲ್ಲವಾದರೆ ಜಿಲ್ಲೆ ಹಾಗೂ ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.
ಕರ್ನಾಟಕ ಮಾದಿಗ ದಂಡೋರ ಹಾಗೂ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಜಾವಗಲ್ ಇಂದ್ರೇಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ನೇರ ನಡೆ-ನುಡಿಯ ದೀನ ದಲಿತರ ನಾಯಕನನ್ನು ಒತ್ತಡಕ್ಕೆ ಮಣಿದು ವಜಾ ಮಾಡಿರುವುದು ಖಂಡನೀಯ” ಎಂದರು.
ಮತ್ತೊಬ್ಬ ದಲಿತ ಮುಖಂಡ ದಿನೇಶ್, “ರಾಜಣ್ಣ ಅವರನ್ನು ಕೂಡಲೇ ಮಂತ್ರಿ ಮಾಡಬೇಕು, ಇಲ್ಲದಿದ್ದರೆ ದಲಿತರ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ” ಎಂದು ಎಚ್ಚರಿಸಿದರು.
ಬೇಲೂರು ತಾಲೂಕು ವಾಲ್ಮೀಕಿ ನಾಯಕರ ಸಂಘದ ಅಧ್ಯಕ್ಷ ಮಧುನಾಯಕ, “ರಾಜಣ್ಣ ಅವರು ಬಡವರ ಪರ ಕೆಲಸ ಮಾಡಿ ಕೊಡುಗೆ ನೀಡಿದ್ದಾರೆ. ಅವರ ವಜಾ ತೀರ್ಮಾನವನ್ನು ತೀವ್ರವಾಗಿ ಖಂಡಿಸುತ್ತೇವೆ” ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಹಾಗೂ ತಾಲೂಕು ವಾಲ್ಮೀಕಿ ನಾಯಕರ ಸಂಘದ ಪ್ರತಿನಿಧಿಗಳು, ಕಾಂಗ್ರೆಸ್ ಎಸ್ಟಿ ಘಟಕದ ಜಿಲ್ಲಾಧ್ಯಕ್ಷರು ಉಪಸ್ಥಿತರಿದ್ದರು.

[…] ಹಾಸನ: ರಾಜಣ್ಣ ಅವರನ್ನು ಮರಳಿ ಮಂತ್ರಿ ಮಾಡಿ,… […]