ಚನ್ನರಾಯಪಟ್ಟಣ, ಆ.18: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ ಮೀಸಲಾದ ಹಣವನ್ನು ಪರಿಶಿಷ್ಟರಿಗೆ ಮಾತ್ರ ಬಳಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಹಾಸನ ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಆರ್. ಮಂಜುನಾಥ್ ತಿಳಿಸಿದ್ದಾರೆ.
ಪಟ್ಟಣದ ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು, ಆಗಸ್ಟ್ 21ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಮಟ್ಟದ ಬೃಹತ್ ಪ್ರತಿಭಟನಾ ಧರಣಿ ನಡೆಯಲಿದೆ ಎಂದರು. ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 6,000ಕ್ಕೂ ಹೆಚ್ಚು ದಲಿತ ಕಾರ್ಯಕರ್ತರು ಆಗಮಿಸಲಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಿಂದ ಮಾತ್ರ 1,000ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
“ನಮ್ಮ ಹಕ್ಕಿನ ಹಣವನ್ನು ಬೇರೆಡೆಗೆ ತಿರುಗಿಸದೇ, ಪರಿಶಿಷ್ಟರ ಕಲ್ಯಾಣಕ್ಕೆ ಮಾತ್ರ ಸರಿಯಾಗಿ ಜಾರಿಗೊಳಿಸಬೇಕೆಂಬ ನಮ್ಮ ಹೋರಾಟವನ್ನು ಗಟ್ಟಿಗೊಳಿಸಲು ಪ್ರತಿಯೊಬ್ಬರೂ ಪಾಲ್ಗೊಂಡು ಧರಣಿಯನ್ನು ಯಶಸ್ವಿಗೊಳಿಸಬೇಕು” ಎಂದು ಮಂಜುನಾಥ್ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಮಧು, ರಮೇಶ್, ಲಕ್ಷ್ಮಯ್ಯ, ಕಿಶೋರ್, ಬಾಲಚಂದ್ರ, ರುದ್ರೇಶ್ ಮತ್ತಿತರರು ಉಪಸ್ಥಿತರಿದ್ದರು.

[…] ಚನ್ನರಾಯಪಟ್ಟಣ- ಪರಿಶಿಷ್ಟ ಹಣ ಪರಿಶಿಷ್ಟರಿ… […]