ಸಕಲೇಶಪುರ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ (NH-75) ಶಿರಾಡಿ ಘಾಟಿನ ಹೆಗ್ಗದೆಯ ಬಳಿ ಸೋಮವಾರ ಸಂಜೆ ಭಾರಿ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಚಾಲಕ ನಿಯಂತ್ರಣ ತಪ್ಪಿದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಷ್ಟೇ ಆಗಿವೆ.

ಅಪಘಾತದಿಂದ ರಸ್ತೆ ಸಂಚಾರಕ್ಕೆ ಕೆಲಕಾಲ ವ್ಯತ್ಯಯ ಉಂಟಾದರೂ, ತಕ್ಷಣವೇ ವಾಹನ ತೆರವು ಕಾರ್ಯ ನಡೆಯಿತು.

