ಟಿ.ನರಸೀಪುರ : ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರಂಥಾಲಯದ ಪಿತಾಮಹ ಡಾ.ಎಸ್.ಆರ್.ರಂಗನಾಥ್ ರವರ ಜನ್ಮ ದಿನದ ಅಂಗವಾಗಿ ಗ್ರಂಥಪಾಲಕರ ದಿನಾಚರಣೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ತಾಲ್ಲೂಕು ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಂತರಾಜು ಪಿ ಎಸ್ ಮತ್ತು ತಾಲ್ಲೂಕು ಪಂಚಾಯಿತಿಯ ಯೋಜನಾ ಅಧಿಕಾರಿ ರಂಗಸ್ವಾಮಿ ರವರು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟನೆ ನೆರವೇರಿಸಿದರು.
ನಂತರ ಡಾ. ಎಸ್. ಆರ್. ರಂಗನಾಥ್ ರವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಇಒ ಅನಂತರಾಜು ಮಾತನಾಡಿ ಗ್ರಂಥಾಲಯಗಳು ಜ್ಞಾನ ದೇಗುಲಗಳಿದ್ದಂತೆ ತಲೆ ತಗ್ಗಿಸಿ ಗ್ರಂಥವನ್ನು ಓದಿದರೆ ಈ ಸಮಾಜದಲ್ಲಿ ತಲೆ ಎತ್ತಿ ನಿಲ್ಲುವಂತೆ ಮಾಡುವ ಶಕ್ತಿ ಗ್ರಂಥಗಳಿಗಿವೆ. ಎಲ್ಲಾ ಸಾರ್ವಜನಿಕರು ಇಂತಹ ಗ್ರಂಥಾಲಯಗಳನ್ನು ಬಳಸಿಕೊಳ್ಳುವುದರ ಮೂಲಕ ಗ್ರಂಥಾಲಯಗಳನ್ನು ಪ್ರೋತ್ಸಾಹಿಸಬೇಕೆಂದರು.
ತಾಲ್ಲೋಕು ಯೋಜನಾ ಅಧಿಕಾರಿ ರಂಗಸ್ವಾಮಿ ಮಾತನಾಡಿ ದೇವಾಲಯಕ್ಕೆ ಹೋದರೆ ಕಣ್ಣು ಮುಚ್ಚಿ ಬೇಡ ಬೇಕು ಗ್ರಂಥಾಲಯಕ್ಕೆ ಹೋದರೆ ಕಣ್ಣು ತೆರೆದು ಓದಬೇಕು ಅಂದರೆ ಕಣ್ಣು ಮುಚ್ಚಿಸುವುದು ದೇವಾಲಯ, ಕಣ್ಣು ತೆರೆಸುವುದು ಗ್ರಂಥಾಲಯ ಜ್ಞಾನ ಗ್ರಹಿಸುವ ಶಕ್ತಿ ಗ್ರಂಥಾಲಯಕ್ಕೆ ಇದೆ ಎಂದು ತಿಳಿಸಿ ಗ್ರಂಥಾಲಯಗಳ ಬಗ್ಗೆ ಇನ್ನೂ ಹೆಚ್ಚು ಮಾಹಿತಿ ನೀಡಿ ಗ್ರಾಮಿಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪುಸ್ತಕಗಳನ್ನು ಓದಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇಂತಹ ಗ್ರಂಥಾಲಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಗ್ರಂಥಾಲಯದಲ್ಲಿ ಗ್ರಂಥಪಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸೌಭಾಗ್ಯ ಪ್ರಕಾಶ್ ಮತ್ತು ಶಿವಮಲಯ್ಯ ಇವರುಗಳಿಗೆ ಸನ್ಮಾನಿಸಿ ಅಭಿನಂದಿಸಿ ಬಿಳ್ಕೊಡುಗೆ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತಿ ನರಸೀಪುರ ತಾಲ್ಲೋಕು ಗ್ರಾಮ ಪಂಚಾಯಿತಿ ಗ್ರಂಥಾಲಯ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ನಾರಾಯಣ, ಉಪಾಧ್ಯಕ್ಷರಾದ ಎ ವಿಜಯಲಕ್ಷ್ಮೀ, ಕಾರ್ಯದರ್ಶಿ ರೇವಣ್ಣ ಎಂ., ಸಂಘದ ಪದಾಧಿಕಾರಿಗಳಾದ ಪುಟ್ಟಮಾದು, ನಂಜುಂಡಶಟ್ಟಿ ತಾಲೂಕಿನ ಎಲ್ಲಾ ಅರಿವು ಕೇಂದ್ರ ಗ್ರಾಮ ಪಂಚಾಯಿತಿ ಗ್ರಂಥಾಲಯದ ಗ್ರಂಥಪಾಲಕರು ಉಪಸ್ಥಿತರಿದ್ದರು.
