ನವದೆಹಲಿ: 2024ರ ರಾಜ್ಯ ಇಂಧನ ದಕ್ಷತಾ ಸೂಚ್ಯಂಕ (State Energy Efficiency Index) ವರದಿ ಬಿಡುಗಡೆಯಾಗಿದ್ದು, ಮಹಾರಾಷ್ಟ್ರ, ಆಂಧ್ರಪ್ರದೇಶ, ಅಸ್ಸಾಂ ಹಾಗೂ ತ್ರಿಪುರ ರಾಜ್ಯಗಳು ಅಗ್ರಸ್ಥಾನದಲ್ಲಿವೆ.
ಇಂಧನ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸುವುದು, ನವೀಕರಿಸಬಹುದಾದ ಶಕ್ತಿಯ ಬಳಕೆ ಹೆಚ್ಚಿಸುವುದು, ವಿದ್ಯುತ್ ಉಳಿತಾಯಕ್ಕೆ ತಾಂತ್ರಿಕ ಸಾಧನಗಳನ್ನು ಜಾರಿಗೆ ತರುವುದು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸುಧಾರಣೆ ಸೇರಿದಂತೆ ಹಲವು ಮಾನದಂಡಗಳ ಆಧಾರದ ಮೇಲೆ ಈ ಮೌಲ್ಯಮಾಪನ ನಡೆಸಲಾಗಿದೆ.
ಅಗತ್ಯ ಮೂಲಸೌಕರ್ಯ ನಿರ್ಮಾಣ, ಶಕ್ತಿ ದಕ್ಷತಾ ಯೋಜನೆಗಳ ಅನುಷ್ಠಾನ ಮತ್ತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವಲ್ಲಿ ಈ ರಾಜ್ಯಗಳು ಮೆಚ್ಚುಗೆಗೆ ಪಾತ್ರವಾಗಿವೆ.
ಇಂಧನ ದಕ್ಷತೆ ರಾಜ್ಯಗಳ ಆರ್ಥಿಕ ಅಭಿವೃದ್ಧಿಯ ಜೊತೆಗೆ ಪರಿಸರ ಸಂರಕ್ಷಣೆಯಲ್ಲಿಯೂ ಮಹತ್ತರ ಪಾತ್ರ ವಹಿಸುತ್ತದೆ ಎಂದು ಕೇಂದ್ರ ಇಂಧನ ಸಚಿವಾಲಯ ಸ್ಪಷ್ಟಪಡಿಸಿದೆ.
