ಬಿಡಬ್ಲ್ಯುಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ನಲ್ಲಿ ಭಾರತದ ಅಗ್ರ ಡಬಲ್ಸ್ ಆಟಗಾರರಾದ ಸಾತ್ವಿಕ್ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಕಂಚಿನ ಪದಕ ಜಯಿಸಿದ್ದಾರೆ.
ಈ ಮೂಲಕ ಪ್ರತಿಷ್ಠಿತ ಟೂರ್ನಿಯಲ್ಲಿ ಸಾತ್ವಿಕ್–ಚಿರಾಗ್ ಜೋಡಿ ಎರಡನೇ ಬಾರಿಗೆ ಕಂಚು ತಂದುಕೊಟ್ಟಿದೆ. 2022ರಲ್ಲಿ ಇದೇ ಸ್ಪರ್ಧೆಯಲ್ಲಿ ಅವರು ಮೊದಲ ಬಾರಿಗೆ ಕಂಚಿನ ಪದಕ ಗೆದ್ದಿದ್ದರು.
