ಹಾಸನ:ನಗರದ ಪಂಚಾಯತ್ ರಾಜ್ ಕಚೇರಿಯಲ್ಲಿ ಇಂದು ಲೋಕಾಯುಕ್ತ ತಂಡವು ದಿಡೀರ್ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿತು. ಲೋಕಾಯುಕ್ತ ಎಸ್ಪಿ ಸ್ನೇಹ ಅವರ ನೇತೃತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ಶಿಲ್ಪ ಮತ್ತು ಚಂದ್ರಶೇಖರ್ ಈ ಕಾರ್ಯಾಚರಣೆ ನಡೆಸಿದರು.
ಹಣಕಾಸು ವ್ಯವಹಾರಗಳಲ್ಲಿ ಅಕ್ರಮ ನಡೆದಿದೆ ಎಂಬ ಗುಪ್ತ ಮಾಹಿತಿ ಆಧರಿಸಿ ದಾಳಿ ನಡೆದಿದ್ದು, ಎಫ್ಡಿಎ ಲತಾ ಮತ್ತು ಅಕೌಂಟೆಂಟ್ ರಾಮಚಂದ್ರ ಅವರ ವಿರುದ್ಧ ದಾಖಲೆಗಳನ್ನು ಪರಿಶೀಲಿಸಲಾಯಿತು. ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡು ಲೋಕಾಯುಕ್ತ ತನಿಖೆಯನ್ನು ಆರಂಭಿಸಿದೆ.
ದಾಳಿಯ ವೇಳೆ ಕಚೇರಿಯ ಸಿಬ್ಬಂದಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ತನಿಖೆ ಪೂರ್ಣಗೊಂಡ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
