ಸಕಲೇಶಪುರ : ಸಕಲೇಶಪುರ ತಾಲ್ಲೂಕಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಒಂದು ಲೋಡ್ ಮರದ ನಾಟವನ್ನು ವಶಪಡಿಸಿಕೊಂಡಿದ್ದಾರೆ.
DFO ಸೌರಭ್ ಕುಮಾರ್ ಹಾಗೂ ACF ಮಧುಸೂದನ್ ಅವರ ಮಾರ್ಗದರ್ಶನದಲ್ಲಿ ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್, ಉಪವಲಯ ಅರಣ್ಯಾಧಿಕಾರಿಗಳಾದ ಮಹದೇವ್, ಅರ್ಜುನ್, ಮಂಜುನಾಥ್ ಹಾಗೂ ಗಸ್ತು ಅರಣ್ಯ ಪಾಲಕರಾದ ಯೋಗೇಶ್, ದೇವರಾಜ್, ಜಯಸ್ವಾಮಿ ಮತ್ತು ಅರಣ್ಯ ವೀಕ್ಷಕ ಲೋಕೇಶ್ ಸೇರಿ ವಿಶೇಷ ತಂಡವನ್ನು ರಚಿಸಿ ದಾಳಿ ನಡೆಸಿದರು.
ಕಾರ್ಯಾಚರಣೆಯ ವೇಳೆ ವಾಹನ ಸಂಖ್ಯೆ KA-14 B 3463 ಯಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಒಂದು ಲೋಡ್ ಬಿಲೆಟ್ಸ್ ಅನ್ನು ಕುಪ್ಪಳ್ಳಿ ಪ್ರದೇಶದಲ್ಲಿ ವಶಪಡಿಸಿಕೊಳ್ಳಲಾಯಿತು.
ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಮುಂದುವರಿದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಯುತ್ತಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.
