ಅಬುಧಾಬಿ: 2025ರ ಏಷ್ಯಾಕಪ್ ಟೂರ್ನಿ ನಡೆಯುತ್ತಿರುವ ಸಂದರ್ಭದಲ್ಲಿಯೇ ಲಂಕಾ ಕ್ರಿಕೆಟಿಗನ ಪಾಲಿಗೆ ಬರಸಿಡಿಲು ಬಡಿದಂತ ಅನುಭವವಾಗಿದೆ. ಏಷ್ಯಾಕಪ್ ಟೂರ್ನಿಯ ‘ಬಿ’ ಗುಂಪಿನ ಕೊನೆಯ ಪಂದ್ಯದಲ್ಲಿ ಆಫ್ಘಾನಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯಕ್ಕೆ ಇಲ್ಲಿನ ಶೇಖ್ ಝಾಯೆದ್ ಮೈದಾನ ಆತಿಥ್ಯ ವಹಿಸಿತ್ತು.
ಈ ಪಂದ್ಯದಲ್ಲಿ ಶ್ರೀಲಂಕಾದ ಎಡಗೈ ಸ್ಪಿನ್ನರ್ ದುನಿತ್ ವೆಲ್ಲಾಲಗೆ ಒಂದೇ ಓವರ್ನಲ್ಲಿ ಆಫ್ಘಾನ್ ಅನುಭವಿ ಆಲ್ರೌಂಡರ್ ಮೊಹಮ್ಮದ್ ನಬಿ 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದರು. ಇದೇ ಸಂದರ್ಭದಲ್ಲಿ ದುನಿತ್ ವೆಲ್ಲಾಲಗೆ ಅವರ ತಂದೆ ಹೃದಯಾಘಾತದಿಂದ ಕೊನೆಯುಸಿರೆಳೆದ ಘಟನೆ ನಡೆದಿದೆ. ಶ್ರೀಲಂಕಾ ಹೆಡ್ ಕೋಚ್ ಸನತ್ ಜಯಸೂರ್ಯ, ಈ ವಿಷಯವನ್ನು ದುನಿತ್ ವೆಲ್ಲಾಲಗೆ ಅವರಿಗೆ ಹೇಳಿ ಸಮಾಧಾನ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
ಶಾಕಿಂಗ್ ಸುದ್ದಿ ತಿಳಿಸಿದ ಜಯಸೂರ್ಯ
ಆಫ್ಘಾನಿಸ್ತಾನ ಹಾಗೂ ಶ್ರೀಲಂಕಾ ನಡುವಿನ ಪಂದ್ಯ ನಡೆಯುತ್ತಿರುವಾಗಲೇ ಶ್ರೀಲಂಕಾ ಸ್ಟಾರ್ ಕ್ರಿಕೆಟಿಗನ ತಂದೆ ಸುರಂಗ ವೆಲ್ಲಾಲಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇದಾದ ನಂತರ ಮ್ಯಾಚ್ ಮುಕ್ತಾಯದ ಬಳಿಕ ಲಂಕಾ ಕ್ರಿಕೆಟಿಗನಿಗೆ ಈ ದುರಂತದ ಸುದ್ದಿ ತಿಳಿಸಲಾಗಿದೆ. ಸನತ್ ಜಯಸೂರ್ಯ, ಯುವ ಕ್ರಿಕೆಟಿಗನಿಗೆ ಸಮಾಧಾನ ಹೇಳುತ್ತಿರುವ ವಿಡಿಯೋವೀಗ ಸಾಮಾಜಿಕ
