ಶ್ಲೋಕ – 04
ಸಾಂಖ್ಯಯೋಗೌ ಪೃಥಗ್ ಬಾಲಾಃ ಪ್ರವದದಂತಿ ನ ಪಂಡಿತಾಃ ।
ಏಕಮಪ್ಯಾಸ್ಥಿತಃ ಸಮ್ಯಗುಭಯೋರ್ವಿಂದತೇ ಫಲಮ್ ॥೪॥
ಜ್ಞಾನ ಮತ್ತು ಕರ್ಮದ ದಾರಿ ಬೇರೆ ಬೇರೆ [ಒಂದು ಸಂನ್ಯಾಸಿಗಳಿಗೆ ಹಾಗು ಇನ್ನೊಂದು ಸಂಸಾರಿಗಳಿಗೆ] ಎಂದು ನುಡಿದವರು ಬಾಲಿಷರು[ತಿಳಿಗೇಡಿಗಳು]; ತಿಳಿದವರಲ್ಲ. ಯಾವುದೋ ಒಂದು ದಾರಿಯಲ್ಲಿ ಸರಿಯಾಗಿ ನಡೆದವನು ಎರಡರ ಫಲವನ್ನೂ ಪಡೆಯುತ್ತಾನೆ. ಹಿಂದೆ ಕರ್ಮಸಂನ್ಯಾಸ ಮತ್ತು ಕರ್ಮಯೋಗವನ್ನು ವಿವರಿಸಿದಂತೆ ಕೃಷ್ಣ ಇಲ್ಲಿ ಸಾಖ್ಯವನ್ನು(ಜ್ಞಾನ-Spiritual Wisdom) ಮತ್ತು ಯೋಗವನ್ನು(ಅನುಷ್ಠಾನ-Spiritual Practice) ವಿವರಿಸುತ್ತಾನೆ.ಶಾಸ್ತ್ರದಲ್ಲಿ ಸಾಂಖ್ಯ(ಸಮ್ಯಕ್ ಖ್ಯಾತಿ) ಎಂದರೆ ಗಣಿತವಲ್ಲ, ಅದು ಶುದ್ಧ ಆತ್ಮತತ್ವವಿಜ್ಞಾನ-ಭಗವಂತನ ಜ್ಞಾನ.
ಅಂದರೆ ಯಾವುದೇ ಒಂದನ್ನು ನೀನು ಚೆನ್ನಾಗಿ ಆಚರಣೆಗೆ ತಂದರೆ ಎರಡರ ಫಲವನ್ನೂ ಪಡೆಯುತ್ತಿ ಎಂದರ್ಥ.
ಏಕಮಪ್ಯಾಸ್ಥಿತಃ ಸಮ್ಯಗುಭಯೋರ್ವಿಂದತೇ ಫಲಮ್ ॥೪॥
ಜ್ಞಾನ ಮತ್ತು ಕರ್ಮದ ದಾರಿ ಬೇರೆ ಬೇರೆ [ಒಂದು ಸಂನ್ಯಾಸಿಗಳಿಗೆ ಹಾಗು ಇನ್ನೊಂದು ಸಂಸಾರಿಗಳಿಗೆ] ಎಂದು ನುಡಿದವರು ಬಾಲಿಷರು[ತಿಳಿಗೇಡಿಗಳು]; ತಿಳಿದವರಲ್ಲ. ಯಾವುದೋ ಒಂದು ದಾರಿಯಲ್ಲಿ ಸರಿಯಾಗಿ ನಡೆದವನು ಎರಡರ ಫಲವನ್ನೂ ಪಡೆಯುತ್ತಾನೆ. ಹಿಂದೆ ಕರ್ಮಸಂನ್ಯಾಸ ಮತ್ತು ಕರ್ಮಯೋಗವನ್ನು ವಿವರಿಸಿದಂತೆ ಕೃಷ್ಣ ಇಲ್ಲಿ ಸಾಖ್ಯವನ್ನು(ಜ್ಞಾನ-Spiritual Wisdom) ಮತ್ತು ಯೋಗವನ್ನು(ಅನುಷ್ಠಾನ-Spiritual Practice) ವಿವರಿಸುತ್ತಾನೆ.ಶಾಸ್ತ್ರದಲ್ಲಿ ಸಾಂಖ್ಯ(ಸಮ್ಯಕ್ ಖ್ಯಾತಿ) ಎಂದರೆ ಗಣಿತವಲ್ಲ, ಅದು ಶುದ್ಧ ಆತ್ಮತತ್ವವಿಜ್ಞಾನ-ಭಗವಂತನ ಜ್ಞಾನ.
ಯಾರ ಅಂಕೆಯಲ್ಲಿ ಈ ಇಡೀ
ಜಗತ್ತು ನಡೆಯುತ್ತಿದೆಯೋ ಅವನ ಅರಿವು. ಇದನ್ನು ತಿಳಿಯದೇ ಇರುವವರನ್ನು ಕೃಷ್ಣ ಬಾಲಿಷರು ಹಾಗು ಅಂತವರ ಮಾತಿಗೆ ಮೂಲ ಆಧಾರ ಎನ್ನುವುದಿಲ್ಲ ಎನ್ನುತ್ತಾನೆ. ಇಷ್ಟು ಹೇಳಿ ಕೃಷ್ಣ ಹೇಳುತ್ತಾನೆ “ಏಕಮಪ್ಯಾಸ್ಥಿತಃ ಸಮ್ಯಗುಭಯೋರ್ವಿಂದತೇ ಫಲಮ್” ಎಂದು.ಅಂದರೆ ಯಾವುದೇ ಒಂದನ್ನು ನೀನು ಚೆನ್ನಾಗಿ ಆಚರಣೆಗೆ ತಂದರೆ ಎರಡರ ಫಲವನ್ನೂ ಪಡೆಯುತ್ತಿ ಎಂದರ್ಥ.
ಇಲ್ಲಿ
ಪುನಃ ನಮಗೆ ಗೊಂದಲವಾಗಬಹುದು. ಇದರರ್ಥ ಜ್ಞಾನವನ್ನು ಮಾತ್ರ ಅಥವಾ ಕರ್ಮವನ್ನು ಮಾತ್ರ ಆಚರಣೆ ಮಾಡುವುದು ಎಂದಲ್ಲ. ನಾವು ಕರ್ಮವನ್ನು ಚನ್ನಾಗಿ ಮಾಡುವದು ಎಂದರೆ ತಿಳಿದು ಜ್ಞಾನಪೂರ್ವಕವಾಗಿ ಮಾಡುವದು, ಅದೇ ರೀತಿ ಜ್ಞಾನ ಚನ್ನಾಗಿರುವುದು ಎಂದರೆ ತಿಳಿದಿದ್ದನ್ನು ಅನುಷ್ಠಾನಗೊಳಿಸುವುದು. ಆದ್ದರಿಂದ ಒಂದು ‘ಜ್ಞಾನಪ್ರಧಾನ‘ ಇನ್ನೊಂದು ‘ಕರ್ಮ ಪ್ರಧಾನ‘ವಾಗಿರಬಹುದು ಆದರೆ ಒಂದು ಇನ್ನೊಂದಕ್ಕೆ ಪೂರಕ. ಯಾರು ಇದನ್ನು ತಿಳಿದಿದ್ದಾರೆ ಅವರು ಪಂಡಿತರು ಹಾಗು ಅವರು ನಿಜವಾದ ಫಲವನ್ನೂ ಪಡೆಯುತ್ತಾರೆ.
[…] ಭಗವದ್ಗೀತೆ ಗೀತಾಸಾರ- ಅಧ್ಯಾಯ 5- ಶ್ಲೋಕ -4 […]