ಟಿ.ನರಸೀಪುರ : ಬಿ.ಕುರುಬೂರು ಗ್ರಾಮದ ಆಯುಷ್ಮಾನ್ ಆರೋಗ್ಯ ಕೇಂದ್ರದಲ್ಲಿ ” ಸ್ವಸ್ಥ ನಾರಿ ಸಶಕ್ತ ಪರಿವಾರ ” ಅಭಿಯಾನ ಕಾರ್ಯಕ್ರಮ ನಡೆಯಿತು.
ತಾಲ್ಲೂಕಿನ ಬಿ.ಕುರುಬೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಪ್ರಗತಿಪರ ರೈತರಾದ ಶಂಕರ್ ಗುರು ಅಭಿಯಾನ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿ ಸರ್ಕಾರ ಆರೋಗ್ಯದ ವಿಷಯವಾಗಿ ಹಲವಾರು ಸೌಲಭ್ಯಗಳನ್ನು ನೀಡಿದ್ದು ಅವುಗಳನ್ನು ಸದುಪಯೋಗ ಪಡಿಲಿಕೊಳ್ಳುವಂತೆ ತಿಳಿಸಿದರು.
ಮಾಡ್ರಳ್ಳಿ ಗ್ರಾಮದ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಅಂಬರೀಶ್ ಪಾಟೀಲ್ ಮಾತನಾಡಿ ಅಧಿಕ ರಕ್ತದೊತ್ತಡ, ಮಧುಮೇಹ,ಬೊಜ್ಜು ನಿಯಂತ್ರಣ,ಪ್ರಸವಪೂರ್ವ ತಪಾಸಣೆ,ಆಹಾರ ಪದ್ಧತಿ,ಮಕ್ಕಳಿಗೆ ಲಸಿಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿ ಅಗತ್ಯ ಸಂದರ್ಭಗಳಲ್ಲಿ ವೈದ್ಯರ ಬಳಿ ಹೋಗಿ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕೆಂದರು.
ಮಹಿಳೆಯರು ತಮ್ಮ ಆರೋಗ್ಯದ ಜೊತೆಗೆ ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು.ಆಯುಷ್ಮಾನ್ ಆರೋಗ್ಯ ಕೇಂದ್ರ,ಸಮುದಾಯ ಹಾಗೂ ಅಂಗನವಾಡಿ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.
ವರದಿ : ಎಂ ನಾಗೇಂದ್ರ ಕುಮಾರ್
