ತುಮಕೂರು: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ನ ಗ್ರಾಮಾಂತರ ಯೋಜನಾ ಕಚೇರಿ ವ್ಯಾಪ್ತಿಯ ಬೆಳ್ಳಾವಿ ವಲಯದ ಚಿಕ್ಕನಾರವಂಗಲ ಗ್ರಾಮದಲ್ಲಿ ಹೈನುಗಾರಿಕೆ ಮಾಹಿತಿ ತರಬೇತಿಯನ್ನು ಹಮ್ಮಿಕೊಂಡಿದ್ದು. ಕಾರ್ಯಕ್ರಮವನ್ನು ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷರಾದ ಜ್ಞಾನದೇವ್ ರವರು ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿ ಡಾ. ಮಲ್ಲೇಶಪ್ಪ ರವರು ಹೈನುಗಾರಿಕೆ ಮಾಡುವಾಗ ಇರಬೇಕಾದ ಜವಾಬ್ದಾರಿ ಮತ್ತು ಹಸುಗಳ ನಿರ್ವಹಣೆ ಬಗ್ಗೆ ಮತ್ತು ಹಸುಗಳಿಗೆ ಬರುವ ಕಾಯಿಲೆಗಳ ಬಗ್ಗೆ ಮತ್ತು ರೇಬಿಸ್ ಕಾಯಿಲೆ ಹಾಗೂ ವ್ಯಾಕ್ಸಿನ್ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ಶಾರದಮ್ಮ. ಗ್ರಾಮದ ಮುಖಂಡರಾದ ರಾಜಶೇಖರಯ್ಯ ಓಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಮುನಿರತ್ನಮ್ಮ, ಕೃಷಿ ಮೇಲ್ವಿಚಾರಕ ರಾಘವೇಂದ್ರ ಎನ್, ಸೇವಾಪ್ರತಿನಿಧಿ ಶ್ರೀಮತಿ ಭಾಗ್ಯಮ್ಮ ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘದ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ : ಕೆ ಬಿ ಚಂದ್ರಚೂಡ್
