ತುಮಕೂರು: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗ್ರಾಮಾಂತರ ಯೋಜನಾ ಕಚೇರಿ ವ್ಯಾಪ್ತಿಯ ಭೀಮಸಂದ್ರ ವಲಯದ ಮಲ್ಲಸಂದ್ರ ಗ್ರಾಮದಲ್ಲಿ ಮಣ್ಣು ಪರೀಕ್ಷೆ ಮತ್ತು ಸಸ್ಯ ಪೋಷಕಾಂಶ ನಿರ್ವಹಣೆ ಬಗ್ಗೆ ತರಬೇತಿ ಹಮ್ಮಿಕೊಂಡಿದ್ದು. ಕಾರ್ಯಕ್ರಮವನ್ನು ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಸಮಿತಿ ಕಾರ್ಯದರ್ಶಿ ನಾಗರಾಜು ರವರು ಉದ್ಘಾಟಿಸಿ ನಂತರ ಮಾತನಾಡುತ್ತಾ ಈಗಿನ ಆಧುನಿಕ ಕೃಷಿ ಪದ್ಧತಿಯಲ್ಲಿ ಅತಿಯಾದ ರಸಗೊಬ್ಬರ ಬಳಕೆಯಿಂದ ಕೃಷಿ ಬೆಳೆಗಳು ವಿವಿಧ ರೋಗಗಳಿಗೆ ತುತ್ತಾಗುತ್ತಿವೆ ಆದ್ದರಿಂದ ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಸಂಸ್ಥೆ ಮಾಡುತ್ತಿದೆ ಪೂಜ್ಯ ವೀರೇಂದ್ರಹೆಗ್ಗಡೆಯವರು ಯೋಜನೆ ಮೂಲಕ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿದ ನಿವೃತ್ತ ಕೃಷಿ ಅಧಿಕಾರಿ ರಾಜಶೇಖರಯ್ಯ ರವರು ರೈತರು ತಮ್ಮ ಜಮೀನಿನಲ್ಲಿ ಮಣ್ಣು ಪರೀಕ್ಷೆ ಮಾಡಿಸಬೇಕು ಮತ್ತು ತಮ್ಮ ಹೊಲದಲ್ಲಿ ಮಣ್ಣು ಸವಕಳಿ ಆಗದಂತೆ ತಡೆಯಲು ಬದುಗಳನ್ನು ಹಾಕಬೇಕು ಹಾಗೂ ಕೃಷಿ ಇಲಾಖೆ ಅನುದಾನಗಳ ಬಗ್ಗೆ ಮಾಹಿತಿ ನೀಡಿದರು.
ತೋಟಗಾರಿಕೆ ಇಲಾಖೆಯ ಜೇನು ಕೃಷಿ ಸಹಾಯರಾದ ಜಗದೀಶ್ ರವರು ಜೇನು ಸಾಕಾಣಿಕೆ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರಾದ ಜಯಣ್ಣ, ಕೃಷಿ ಮೇಲ್ವಿಚಾರಕ ರಾಘವೇಂದ್ರ.ಎನ್. ವಲಯ ಮೇಲ್ವಿಚಾರಕ ಸುದರ್ಶನ್, ಸೇವಾಪ್ರತಿನಿಧಿ ಶ್ರೀಮತಿ ಪುಷ್ಪಲತಾ, ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘದ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ : ಕೆ ಬಿ ಚಂದ್ರಚೂಡ್
