ಕೆ.ಆರ್.ಪೇಟೆ,ಸೆ.26: ಇದೇ ಸೆ.28ರಂದು ನಡೆಯುವ ಟಿಎಪಿಸಿಎಂಎಸ್ ಚುನಾವಣೆಯು ಮಿನಿ ವಿಧಾನಸಭಾ ಚುನಾವಣೆಯಂತೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಕೂಟದಿಂದ ಸ್ಪರ್ಧೆ ಮಾಡಿರುವ ಎ.ವರ್ಗದ 6, ಬಿ.ವರ್ಗದ 8ಅಭ್ಯರ್ಥಿಗಳು ಗೆಲ್ಲುವುದು ಖಚಿತವಾಗಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ನಮಗೆ ಯಾವುದೇ ಪ್ರತಿಸ್ಪರ್ಧಿಗಳಲ್ಲ. ನಾವು ಸರ್ಕಾರದ ವಿರುದ್ದ ಹೋರಾಟ ಮಾಡಬೇಕಾಗಿದೆ ಹಾಗಾಗಿ ಕಾರ್ಯಕರ್ತರು ಹಾಗೂ ಹೆಚ್ಚು ಜವಬ್ದಾರಿ ತೆಗೆದುಕೊಂಡು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ಶಾಸಕ ಹೆಚ್.ಟಿ.ಮಂಜು ಕಾರ್ಯಕರ್ತರು ಹಾಗೂ ಜೆಡಿಎಸ್ ಮುಖಂಡರಲ್ಲಿ ಮನವಿ ಮಾಡಿದರು.
ಅವರು ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು, ಕಿಕ್ಕೇರಿ, ಬೂಕನಕೆರೆ ಹೋಬಳಿ ಕೇಂದ್ರಗಳಲ್ಲಿ ತಾಲ್ಲೂಕು ಟಿಎಪಿಸಿಎಂಎಸ್ ಚುನಾವಣೆಯ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಜನತಾದಳ ಮತ್ತು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಟಿಎಪಿಸಿಎಂಎಸ್ ಸಂಸ್ಥೆಯ ಚುನಾವಣೆಗೆ ಸ್ಪರ್ಧೆ ಮಾಡಿರುವ ಮೈತ್ರಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.
ಟಿಎಪಿಸಿಎಂಎಸ್ ಸಂಸ್ಥೆಯು ಆರಂಭವಾದ ದಿನದಿಂದಲೂ ಜನತಾದಳ ಪಕ್ಷವೇ ಅಧಿಕಾರ ನಡೆಸಿದೆ. ಆದರೆ ಮಾಜಿ ಸ್ಪೀಕರ್ ಕೃಷ್ಣ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ವರ್ಷ ಅಂದರೆ 2014ರಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಇದನ್ನು ಹೊರತು ಪಡಿಸಿ ಉಳಿದ ಎಲ್ಲಾ ಅವಧಿಯಲ್ಲಿಯೂ ಜನತಾದಳ ಪಕ್ಷವೇ ಭರ್ಜರಿ ಗೆಲುವಿನೊಂದಿಗೆ ಅಧಿಕಾರಕ್ಕೆ ಬಂದಿದೆ. ಈ ಭಾರಿಯೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳೇ ಎಲ್ಲಾ 14ಕ್ಷೇತ್ರಗಳಲ್ಲಿಯೂ ಭರ್ಜರಿ ಗೆಲುವು ಸಾಧಿಸಲಿದ್ದಾರೆ.

ಎಲ್ಲಾ ಹೋಬಳಿಗಳಲ್ಲಿಯೂ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿದ್ದೇವೆ ಎಲ್ಲಾ ಕಡೆಯೂ ಉತ್ತಮ ಜನಸ್ಪಂಧನೆ ಕಂಡು ಬಂದಿದೆ. ಟಿಎಪಿಸಿಎಂಎಸ್ ಸಂಸ್ಥೆಯ ಶೇರುದಾರ ಮತದಾರರು ಪ್ರಚಾರ ಸಭೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಮ್ಮ ಜನತಾದಳ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಈ ಜನ ಬೆಂಬಲವು ನಮ್ಮ ಗೆಲುವಿನ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಆದರೂ ನಮ್ಮ ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರು ಮೈಮರೆಯದೇ ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡು ತಮ್ಮ ತಮ್ಮ ಗ್ರಾಮಗಳಲ್ಲಿರುವ ಬಿ.ವರ್ಗದ ಶೇರುದಾರ ಮತದಾರರನ್ನು ಬೇಟಿ ಮಾಡಿ ಕ್ರಮ ಸಂಖ್ಯೆ ಮತ್ತು ಚಿಹ್ನೆಯನ್ನು ಮನವರಿಕೆ ಮಾಡಿಕೊಡಬೇಕು ಈ ಮೂಲಕ ಹೆಚ್ಚಿನ ಮತಗಳ ಅಂತರದಿಂದ ಬಿ.ವರ್ಗದ ಎಲ್ಲಾ 8ಮಂದಿ ಅಭ್ಯರ್ಥಿಗಳು ಗೆಲುವು ಸಾಧಿಸುವಂತೆ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಒಬ್ಬ ಅಭ್ಯರ್ಥಿಯೂ ಸೋಲದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ನೆಮ್ಮೆಲ್ಲರ ಮೇಲಿದೆ ಎಂದು ಶಾಸಕರು ಹೇಳಿದರು.
ಪ್ರಚಾರ ಸಭೆಯಲ್ಲಿ ರಾಜ್ಯ ಸಹಕಾರ ಮಹಾಮಂಡಲದ ಪ್ರಾದೇಶಿಕ ನಿರ್ದೇಶಕ ಚೋಳೇನಹಳ್ಳಿ ಪುಟ್ಟಸ್ವಾಮೀಗೌಡ, ಎಸ್.ಎಲ್.ಮೋಹನ್, ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯ ಮಾಜಿ ಉಪಾಧ್ಯಕ್ಷ ಬೋಳಮಾರನಹಳ್ಳಿ ಮಂಜುನಾಥ್, ದಿಶಾ ಸಮಿತಿ ಸದಸ್ಯ ನರಸನಾಯಕ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್.ಕೆ.ಅಶೋಕ್, ಪಿಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎ.ಆರ್.ರಘು, ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕುರುಬಹಳ್ಳಿ ನಾಗೇಶ್, ಟಿಎಪಿಸಿಎಂಎಸ್ ಉಪಾಧ್ಯಕ್ಷ ಸೋಮನಹಳ್ಳಿ ಮೋಹನ್, ನಿರ್ದೇಶಕ ಕೊರಟೀಕೆರೆ ದಿನೇಶ್, ಮುಖಂಡರಾದ ಹುಲ್ಲೇಗೌಡ, ಐನೋರಹಳ್ಳಿ ಮಲ್ಲೇಶ್, ಬಿ.ಎಂ.ಕಿರಣ್, ಎ.ಜೆ.ಕುಮಾರ್, ಕಿಕ್ಕೇರಿ ಕೃಷ್ಣೇಗೌಡ, ಕೆ.ಬಿ.ನಾಗೇಶ್, ಎಸ್.ಆರ್.ನವೀನ್ಕುಮಾರ್, ಸಾಮಿಲ್ ರವಿಕುಮಾರ್, ಅಜಯ್ ರಾಮೇಗೌಡ, ಕಾಯಿ ಮಂಜೇಗೌಡ, ಶೇಖರ್, ಬಿ.ವರ್ಗದ ಅಭ್ಯರ್ಥಿಗಳಾದ ಎಸ್.ಎಲ್.ಮೋಹನ್, ಮಲ್ಲೇನಹಳ್ಳಿ ಎಂ.ಮೋಹನ್, ಕಿಕ್ಕೇರಿ ಕೆ.ಬಿ.ಮಧು, ನಾಗರಘಟ್ಟ ದಿಲೀಪ್ಕುಮಾರ್, ಎಂ.ಡಿ.ಜ್ಯೋತಿ, ಬಿ.ಆರ್.ಲತಾಮಣಿಮಂಜುನಾಥ್, ರಂಗನಾಥಪುರ ನಾಗರಾಜು, ಬೊಮ್ಮೇನಹಳ್ಳಿ ಮಂಜುನಾಥ್, ಎ.ವರ್ಗದ ಅಭ್ಯರ್ಥಿಗಳಾದ ಟಿ.ಬಲದೇವ್, ಬಿ.ಎಂ.ಕಿರಣ್, ಕುರುಬಹಳ್ಳಿ ಕೆ.ಬಿ.ನಾಗೇಶ್, ಹೆಚ್.ಟಿ.ಲೋಕೇಶ್, ಶಾಸಕರ ಆಪ್ತ ಸಹಾಯಕ ಪ್ರತಾಪ್, ಪ್ರದೀಪ್ ಮತ್ತಿತರರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.

[…] […]
[…] […]