ಹಾಸನ, ಸೆ.28: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಎಡೇಗೌಡನಹಳ್ಳಿ ಬಳಿ ಶನಿವಾರ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೂವರು ಯುವಕರು ದುರ್ಮರಣ ಹೊಂದಿರುವ ಘಟನೆ ನಡೆದಿದೆ.
ಹಳ್ಳಿಮೈಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ KA-03-KS-3630 ನಂಬರಿನ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಯುವಕರ ಬೈಕ್ಗೆ ಎದುರು ಬಂದು ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಇರ್ಫಾನ್ (25) ಸ್ಥಳದಲ್ಲೇ ಸಾವನ್ನಪ್ಪಿದ್ದು, ತರುಣ್ (26) ಮತ್ತು ರೇವಂತ್ (27) ಎಂಬ ಇನ್ನಿಬ್ಬರು ಯುವಕರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ, ಮಾರ್ಗಮಧ್ಯೆ ಪ್ರಾಣ ಕಳೆದುಕೊಂಡಿದ್ದಾರೆ.

ಅಪಘಾತದ ತೀವ್ರತೆಯಿಂದ ಬೈಕ್ ಸಂಪೂರ್ಣ ಧ್ವಂಸಗೊಂಡಿದೆ. ಸ್ಥಳಕ್ಕೆ ಹಳ್ಳಿಮೈಸೂರು ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಥಳೀಯರ ಸಹಾಯದಿಂದ ಮೃತದೇಹಗಳನ್ನು ಹೊಳೆನರಸೀಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
