
ರಾಜ್ಯದಲ್ಲಿ ದ್ವಿತೀಯ ಪಿಯುಸಿ, ಎಸ್ ಎಸ್ ಎಲ್ ಸಿ ಪರೀಕ್ಷಾ ಅಕ್ರಮ ನಡೆಸಿದ್ರೇ ಕಾನೂನು ಕ್ರಮ ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ, ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 21ರಿಂದ ಆರಂಭವಾಗಲಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಗಳನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದುಕೊಳ್ಳುವುದು ಅಥವಾ ಶಂಕಿತ ವ್ಯಕ್ತಿಗಳ ಮೇಲೆ ವಿಶೇಷ ನಿಗಾವಹಿಸಲಾಗಿದೆ. ಪರೀಕ್ಷಾ ಕೇಂದ್ರದ 200ಮೀ ಸುತ್ತಲು ಜೆರಾಕ್ಸ್ ಕೇಂದ್ರಗಳನ್ನು ಪರೀಕ್ಷೆಯ ಅವಧಿಯಲ್ಲಿ ಬಂದ್ ಮಾಡುವುದು. ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್ ಹಾಗೂ ಗೇಮ್ಸ್ ಸೆಂಟರ್ ಕೇಂದ್ರಗಳ ಮೇಲೆ ವಿಶೇಷ ನಿಗಾವಹಿಸಲು ಸೂಚಿಸಿದ್ದಾರೆ.