ಕೆ.ಆರ್.ಪೇಟೆ:ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಆಲಂಬಾಡಿಕಾವಲು ಹಿರಿಯ ಮುಖಂಡರು ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಎ.ಎನ್.ಸಂಜೀವಪ್ಪ (64) ರವರು ಇಂದು ಅನಾರೋಗ್ಯದಿಂದ ಮೈಸೂರಿನ ಬಿ.ಜಿ.ಎಸ್ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರಿಗೆ ಪತ್ನಿ ಬೆಳ್ತೂರು ಗ್ರಾಮದ ಸರ್ಕಾರಿ ಕ ಪ್ರಾಥಮಿಕ ಶಾಲೆಯ ಶಿಕ್ಷಕಿ ಗೌರಮ್ಮ, ಇಬ್ಬರು ಪುತ್ರರು , ಸಹೋದರರು, ಸಹೋದರಿಯರು, ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇದನ್ನು ಓದಿ: ಕೆ.ಆರ್.ಪೇಟೆ: ಖ್ಯಾತ ಕಥೆಗಾರ ಮೊಗಳ್ಳಿ ಗಣೇಶ್ ಅವರಿಗೆ ಕೆ.ಆರ್.ಪೇಟೆಯಲ್ಲಿ ಶ್ರದ್ದಾಂಜಲಿ ಸಭೆ
ಮೃತರ ಅಂತ್ಯಕ್ರಿಯೆಯು ಅ.07ರಂದು ಮಂಗಳವಾರ ಮಧ್ಯಾಹ್ನ 12:30 ಕ್ಕೆ ಆಲಂಬಾಡಿಕಾವಲು ಗ್ರಾಮದಲ್ಲಿ ನೆರವೇರಲಿದೆ ಎಂದುಕುಟುಂಬದ ಸದಸ್ಯರು ತಿಳಿಸಿದ್ದಾರೆ.

*ಸಂತಾಪ: ಎ.ಎಂ.ಸಂಜೀವಪ್ಪ ಅವರ ಹಠಾತ್ ನಿಧನಕ್ಕೆ ಶಾಸಕರಾದ ಹೆಚ್.ಟಿ.ಮಂಜು, ಡಿ.ರವಿಶಂಕರ್, ಮಾಜಿ ಸಚಿವರಾದ ಹೆಚ್.ವಿಶ್ವನಾಥ್, ನಾರಾಯಣಗೌಡ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಸಮಾಜ ಸೇವಕರಾದ ಆರ್.ಟಿ.ಓ.ಮಲ್ಲಿಕಾರ್ಜುನ್, ಬೂಕನಕೆರೆ ವಿಜಯ್ ರಾಮೇಗೌಡ, ಮನ್ ಮುಲ್ ನಿರ್ದೇಶಕರಾದ ಡಾಲು ರವಿ, ಎಂ.ಬಿ.ಹರೀಶ್, ಮೈಸೂರು ಲಾರಿ ಮಾಲೀಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸೇರಿದಂತೆ ಸೇರಿದಂತೆ ತಾಲ್ಲೂಕಿನ ವಿವಿಧ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಆಲಂಬಾಡಿಕಾವಲು ಗ್ರಾಮಸ್ಥರು ತೀವ್ರ ಸಂತಾಪ ಸೂಚಿಸಿದ್ದಾರೆ.
