ಕೆ.ಆರ್.ಪೇಟೆ: ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಐಪನಹಳ್ಳಿ ಬಿ.ನಾಗೇಂದ್ರಕುಮಾರ್ ಅವರನ್ನು ಕರ್ನಾಟಕ ರಾಜ್ಯ ಕೈ ಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ನೂತನ ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ದಿ ನಿಗಮದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ನಾಗೇಂದ್ರಕುಮಾರ್ ಅವರನ್ನು ತಾಲ್ಲೂಕಿನ ಕಾಂಗ್ರೆಸ್ ಮುಖಂಡರು ಅಭಿನಂದಿಸಿದ್ದಾರೆ.
ನೂತನ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ.ನಾಗೇಂದ್ರಕುಮಾರ್ ಮಾತನಾಡಿ ನನ್ನನ್ನು ಗುರುತಿಸಿ ರಾಜ್ಯ ಮಟ್ಟದ ಕೈಮಗ್ಗ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ನನ್ನ ನೇಮಕಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಅವರಿಗೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವ ರಾಯಸ್ವಾಮಿ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ನನಗೆ ಸಿಕ್ಕಿರುವ ಅಧಿಕಾರದ ಅವಧಿಯಲ್ಲಿ ಕೈಮಗ್ಗ ಅಭಿವೃದ್ದಿ ನಿಗಮದ ಮೂಲಕ ಕೈಗೊಳ್ಳಬಹುದಾದ ಅಭಿವೃದ್ದಿ ಕಾರ್ಯಕ್ರಮಗಳನ್ನು ರಾಜ್ಯಾಧ್ಯಂತ ಇರುವ ಕೈಮಗ್ಗ ಗುಡಿ ಕೈಗಾರಿಕೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವ ಮೂಲಕ ಮುಖ್ಯಮಂತ್ರಿಗಳಿಗೆ, ಉಪಮುಖ್ಯಮಂತ್ರಿಗಳಿಗೆ, ಹಾಗೂ ಕೃಷಿ ಸಚಿವರಿಗೆ ಒಳ್ಳೆಯ ಹೆಸರು ತರುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
- ಶ್ರೀನಿವಾಸ್ ಆರ್.
ಇದನ್ನು ಓದಿ: ಭಗವದ್ಗೀತೆ – ಅಧ್ಯಾಯ 5, ಶ್ಲೋಕ 23: ಕಾಮ-ಕ್ರೋಧ ನಿಯಂತ್ರಣ ಮತ್ತು ನಿಜವಾದ ಸುಖ
