ಬೆಂಗಳೂರು: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ 18,000 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಸಜ್ಜಾಗಿದೆ. ಈ ಕುರಿತು ಐತಿಹಾಸಿಕ ಅಧಿಸೂಚನೆ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
2025ರ ನವೆಂಬರ್ ಕೊನೆಯ ವಾರ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ KAR–TET ಪರೀಕ್ಷೆ ನಡೆಸಲು ಯೋಜನೆ ರೂಪಿಸಲಾಗಿದ್ದು, ಬಳಿಕ 2026ರ ಫೆಬ್ರವರಿ ಅಥವಾ ಮಾರ್ಚ್ನಲ್ಲಿ ಶಿಕ್ಷಕರ ನೇಮಕಾತಿಗೆ CET ಪರೀಕ್ಷೆ ನಡೆಸುವ ಸಾಧ್ಯತೆ ಇದೆ.
ಸರ್ಕಾರದ ಈ ನಿರ್ಧಾರದಿಂದ ಸಾವಿರಾರು ಬಿಇಡ್ ಮತ್ತು ಡಿಎಡ್ ಅರ್ಹತಾ ವಿದ್ಯಾರ್ಥಿಗಳಿಗೆ ಸರ್ಕಾರೀ ಸೇವೆಯತ್ತ ದಾರಿ ತೆರೆದುಕೊಳ್ಳಲಿದೆ ಎಂದು ನಿರೀಕ್ಷಿಸಲಾಗಿದೆ.

[…] […]
[…] […]
[…] […]