ಸಕಲೇಶಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪರ ಯೋಜನೆ ಹಾಗೂ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ತಾಲೂಕಿನ ಕುರುಭತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಡ್ಲಹಳ್ಳಿ ಭಾಗದ ಹತ್ತಾರು ಯುವಕರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಶನಿವಾರ ಬಿಜೆಪಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಅವರನ್ನು ಬರಮಾಡಿಕೊಂಡು ಮಾತನಾಡಿದರು.ಕೇಂದ್ರ ಸರಕಾರದ ಅಭಿವೃದ್ಧಿ ಕಾರ್ಯಗಳು ಹಾಗೂ ನರೇಂದ್ರ ಮೋದಿ ಸ್ವಚ್ಛ ಆಡಳಿತವನ್ನು ಇಡೀ ದೇಶದ ಜನರು ಮೆಚ್ಚಿದ್ದಾರೆ.ಮಾಜಿ ಶಾಸಕರಾದ ಬಿ.ಬಿ ಶಿವಪ್ಪನವರು ರಾಷ್ಟ್ರ ಹಾಗೂ ರಾಜ್ಯ ಕಂಡ ಶ್ರೇಷ್ಠ ವ್ಯಕ್ತಿಯಾಗಿದ್ದರು. ನಿಷ್ಕಳಂಕ, ಪ್ರಾಮಾಣಿಕ, ಜಾತಿ ವರ್ಗವನ್ನು ಮೀರಿದ ಅವರ ಆದರ್ಶ ಪಾಲನೆಯಾಗಬೇಕು.ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದು ಮಾದರಿ ಕ್ಷೇತ್ರವನ್ನಾಗಿ ನಿರ್ಮಾಣ ಮಾಡುವ ಕನಸನ್ನು ಶಿವಪ್ಪನವರು ಕನಸು ಕಂಡಿದ್ದರು. ಈ ನಿಟ್ಟಿನಲ್ಲಿ ಅವರು ಹಾಕಿ ಕೊಟ್ಟ ಮಾರ್ಗದರ್ಶನದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದೇನೆ ಎಂದರು.
ತಾಲೂಕು ಬಿಜೆಪಿ ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಮಾತಾನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಹ ತಾಲೂಕು ಅಭಿವೃದ್ಧಿಗಾಗಿ ಶಾಸಕರು ಹಗಲಿರುಳು ಶ್ರಮಿಸುತ್ತಿದ್ದಾರೆ ಶಾಸಕರ ಕೈ ಬಲಪಡಿಸುವ ಸದುದ್ದೇಶದಿಂದ ತಾಲೂಕಿದ್ಯಂತ ವಿವಿಧ ಪಕ್ಷಗಳಿಂದ ಬಿಜೆಪಿಗೆ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತೋಷದ ವಿಷಯವಾಗಿದೆ. ಇನ್ನೂ ಕೆಲವು ತಿಂಗಳಲ್ಲಿ ಗ್ರಾಮ ಪಂಚಾಯಿತಿ, ಜಿಪಂ ಮತ್ತು ತಾಪಂ ಚುನಾವಣೆ ಸಮೀಪದಲ್ಲಿದ್ದು ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ಎಲ್ಲರೂ ತಮಗೆ ವಹಿಸಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಬಾಯಿಸಿದ್ದಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.
ಈ ಸಂಧರ್ಭದಲ್ಲಿ ಬಿಜೆಪಿ ತಾಲ್ಲೂಕು ಮಾಜಿ ಅಧ್ಯಕ್ಷ ಪ್ರತಾಪ್, ಬಿಜೆಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ಅಗ್ನಿ ಸೋಮಶೇಖರ್, ಮಧು ಬೊಮ್ಮನಕೆರೆ, ಬಿಜೆಪಿ ಮುಖಂಡರಾದ ಧರಣೇಶ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

[…] […]