
ಸಂದರ್ಭಕನ್ವಯ ಚಿತ್ರ
ಚಿಕ್ಕಮಗಳೂರು : ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿ ನಡೆದಿದೆ.
ಮೂಡಿಗೆರೆಯ ಮಾಳಿಗನಾಡು ಗ್ರಾಮದ ಸುನೀಲ್ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಮನೆಯಲ್ಲಿ ಇದ್ದ ಗೃಹಪಯೋಗಿ ವಸ್ತುಗಳು ಬಹುತೇಕ ನಾಶವಾಗಿದ್ದು, ಹತ್ತಾರು ಮೂಟೆ ಕಾಫಿ ಬೀಜಗಳೂ ಬೆಂಕಿಗಾಹುತಿಯಾಗಿವೆ.
ಅಡಿಗೆಗೆ ಸ್ಟವ್ ಹಚ್ಚುವ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿ ಅವಘಡದಲ್ಲಿ ಮನೆಯಲ್ಲಿ ಇದ್ದ ರೇಖಾ (36) ತೀವ್ರವಾಗಿ ಗಾಯಗೊಂಡಿದ್ದು ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ದಾಖಲಾಗಿದ್ದು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Madrle bikarigsle bele jasthi madrile lofars nimma ssrkarakke bele herishidaga hartha agutte hallivage hershi bele mude hersoke hagala adakke