ಸಕಲೇಶಪುರ: ದೇಶದಲ್ಲಿ ನಡೆಯುತ್ತಿರುವ ಮತ ಕಳ್ಳತನದ ವಿರುದ್ಧ ಕಾಂಗ್ರೆಸ್ ಪಕ್ಷವು ರಾಷ್ಟ್ರವ್ಯಾಪಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದು, ಸಕಲೇಶಪುರದಲ್ಲಿಯೂ ಕಾಂಗ್ರೆಸ್ ಪ್ರದೇಶ ಸಮಿತಿಯ ವತಿಯಿಂದ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
ಪಟ್ಟಣದ ಅಶೋಕ ರಸ್ತೆಯ ಬಸವಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ಯಾರೆಂಟಿ ಅನುಷ್ಠಾನ ಯೋಜನೆಯ ತಾಲೂಕು ಅಧ್ಯಕ್ಷ ಮುರಳಿ ಮೋಹನ್, “ಮತದಾನ ಹಕ್ಕು ಸಂವಿಧಾನದ ಪ್ರಕಾರ ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು. ಆದರೆ ಇತ್ತೀಚೆಗೆ ನಡೆಯುತ್ತಿರುವ ಮತದಾರರ ಪಟ್ಟಿಯಲ್ಲಿ ಅಕ್ರಮ ಕೃತ್ಯಗಳು, ಮತ ಕಳ್ಳತನದ ಪ್ರಯತ್ನಗಳು ಪ್ರಜಾಪ್ರಭುತ್ವದ ಮೂಲ ಅಸ್ತಿತ್ವಕ್ಕೆ ಧಕ್ಕೆ ತರಿವೆ. ಚುನಾವಣಾ ಆಯೋಗದ ಕಣ್ಣು ತೆರೆಸುವ ನಿಟ್ಟಿನಲ್ಲಿ ಈ ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ,” ಎಂದು ಹೇಳಿದರು.
ಇದನ್ನು ಓದಿ: ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯ ಹುಣಸಿನಕೆರೆ 80ಫೀಟ್ ರಸ್ತೆ ಸ್ವಚ್ಚತೆ : ಪಾಲಿಕೆ ಆಯುಕ್ತ ಆರ್.ಕೃಷ್ಣಮೂರ್ತಿಗೆ ‘ ತಲೆದಂಡ ‘
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೈರುಮುಡಿ ಚಂದ್ರು, ಆಲೂರು ತಾಲೂಕು ಗ್ಯಾರೆಂಟಿ ಅನುಷ್ಠಾನ ಯೋಜನೆಯ ಅಧ್ಯಕ್ಷ ಪೃಥ್ವಿ, ಪಿ.ಎಲ್.ಡಿ. ಬ್ಯಾಂಕ್ ಮಾಜಿ ಅಧ್ಯಕ್ಷ ಹೆಚ್.ಹೆಚ್. ಉದಯ್, ಪುರಸಭೆಯ ಮಾಜಿ ಅಧ್ಯಕ್ಷ ಸಯ್ಯದ್ ಮುಫೀಸ್, ಕಾಂಗ್ರೆಸ್ ಮುಖಂಡ ದೇವರಾಜ್ ಬೈಕೆರೆ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪರ್ವತಯ್ಯ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೃಷ್ಣೇಗೌಡ, ಕಲ್ಗನೆ ಪ್ರಶಾಂತ್, ಹನೀಫ್ ರಾಯಲ್, ಅನಿಲ್ ವೈ.ಪಿ., ರಾಜೇಗೌಡ, ಆನೆ ಮಹಲ್ ಗ್ರಾಮ ಪಂಚಾಯಿತಿ ಸದಸ್ಯ ತಿಮ್ಮಯ್ಯ ಹಾಗೂ ಅನೇಕ ಸ್ಥಳೀಯ ನಾಯಕರು, ಕಾರ್ಯಕರ್ತರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
