
ಹಾಸನ: ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕಾಡಾನೆ-ಮಾನವ ಸಂಘರ್ಷ ದಿನೇ ದಿನೇ ಹೆಚ್ಚಾಗುತ್ತಿದ್ದು, ಸೋಮವಾರ ನಡೆದ ಕಾಡಾನೆ ದಾಳಿಗೆ ಯುವಕ ಬಲಿಯಾಗಿರುವ ಘಟನೆ ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ನಡೆದಿದೆ.
ಅನಿಲ್ (28 ವರ್ಷ) ಮೃತ ಯುವಕ. ಅಣ್ಣಮಲೈ ಎಸ್ಟೇಟ್ಗೆ ಕೆಲಸಕ್ಕೆ ಬಂದಿದ್ದ ಗುಜನಹಳ್ಳಿ ಗ್ರಾಮದ ಅನಿಲ್, ಕೆಲಸ ಮುಗಿಸಿ ಮನೆಗೆ ತೆರಳುವಾಗ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಸೊಂಡಲಿನಿಂದ ಎತ್ತಿ ಬಿಸಾಡಿ, ತುಳಿದು ಯುವಕನನ್ನು ಕೊಂದುಹಾಕಿದೆ.
ಘಟನೆ ತಿಳಿದ ತಕ್ಷಣ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದು, ಈ ಸಂಬಂಧ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.