ಕೆ.ಆರ್.ಪೇಟೆ: ತಾಲೂಕಿನ ಕಸಬಾ ಹೋಬಳಿಯ ಮಾಕವಳ್ಳಿ ಗ್ರಾಮದ ಹಿರಿಯ ಮುಖಂಡ ರಂಗಸ್ವಾಮಿ (60) ಅವರು ತಡರಾತ್ರಿ ಆರೋಗ್ಯದಲ್ಲಿ ದಿಡೀರ್ ಏರುಪೇರು ಹಿನ್ನೆಲೆ.
ಕೆ.ಆರ್.ಪೇಟೆ ಪಟ್ಟಣದಲ್ಲಿರುವ ನ್ಯೂ ಅಪೂರ್ವ ಮಲ್ಟಿಸ್ಪೆಷಲಿಟಿ ಆಸ್ಪತ್ರೆಯಲ್ಲಿ ರಾತ್ರಿ ಚಿಕಿತ್ಸೆ ಪಡೆಯುತ್ತಿದ್ದ ಮೃತರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 10 ಗಂಟೆಯಲ್ಲಿ ಸಾವಿಗೀಡಾಗಿದ್ದಾರೆ. ಮೃತರಿಗೆ ಓರ್ವ ಪುತ್ರ,ಇಬ್ಬರು ಹೆಣ್ಣು ಮಕ್ಕಳು,ಸೇರಿದಂತೆ ಅಪಾರ ತುಂಬಿದ ಬಳಗವನ್ನು ಬಿಟ್ಟು ಅಗಲಿದ್ದಾರೆ ಮೃತರ ಅಂತ್ಯ ಸಂಸ್ಕಾರವು ಮಂಗಳವಾರ (ನಾಳೆ) ಬೆಳಿಗ್ಗೆ 10 ಗಂಟೆಗೆ ನೆರವೇರಲಿದೆ ಎಂದು ಕುಟುಂಬಸ್ಥರ ಮೂಲಗಳು ತಿಳಿಸಿದೆ.
ಮೃತರ ನಿಧನಕ್ಕೆ ಕ್ಷೇತ್ರದ ಹಾಲಿ ಮಾಜಿ ಶಾಸಕರು,ಸಮಾಜ ಸೇವಕರು,ವಿವಿಧ ಸಹಕಾರ ಸಂಘ ಸಂಸ್ಥೆಯ ಅಧ್ಯಕ್ಷರು,ನಿರ್ದೇಶಕರು,ಕನ್ನಡ ಪರ ಸಂಘಟನೆಗಳು ತೀವ್ರ ಸಂತಾಪ ಸೂಚಿಸಿದ್ದಾರೆ.
ಮಾಹಿತಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
