ಮಾರಣಾಂತಿಕ ಗಂಭೀರ ಖಾಯಿಲೆಯಿಂದ ಬಳಲುತ್ತಿರುವವರಿಗೆ ದಯಾಮರಣಕ್ಕೆ ಅವಕಾಶ ನೀಡಿದ ರಾಜ್ಯ ಸರ್ಕಾರ
ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಜಾರಿಗೊಳಿಸಿದೆ. ಈ ಯೋಜನೆಗೆ ಇನ್ನಷ್ಟು ಆಸ್ಪತ್ರೆ ಸೇರಿಸಬೇಕು ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆಯಲ್ಲಿಯೂ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು ಎಂದು ಸರ್ಕಾರಿ ನೌಕರರು ಬೇಡಿಕೆ ಇಟ್ಟಿದ್ದರು.
ಈ ಬೇಡಿಕೆಗೆ ಈಗ ಸರ್ಕಾರ ಒಪ್ಪಿಗೆ ನೀಡಿದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಪವಿತ್ರ, ಸರ್ಕಾರದ ಅಧೀನ ಕಾರ್ಯದರ್ಶಿ (ಪ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶವನ್ನು ಹೊರಡಿಸಿದ್ದಾರೆ.
ಈ ಆದೇಶ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ರೂಪಿಸಲಾಗಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (KASS) ಅನುಷ್ಠಾನಕ್ಕಾಗಿ ಆಸ್ಪತ್ರೆಗಳನ್ನು ನೋಂದಾವಣೆಗೊಳಿಸುವ ಅಧಿಕಾರವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ಗೆ ಪ್ರತ್ಯಾಯೋಜಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.
**ಪ್ರಸ್ತಾವನೆ**
: ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಬೆಂಗಳೂರು ಈ ಸಂಸ್ಥೆಯ ಮುಖಾಂತರ ಅನುಷ್ಠಾನಗೊಳಿಸಲು ಆದೇಶಿಸಲಾಗಿರುತ್ತದೆ.
ಸದರಿ ಯೋಜನೆಗೆ ಒಳಪಡಲು ಇಚ್ಛೆ ವ್ಯಕ್ತಪಡಿಸುವ ಖಾಸಗಿ ಆಸ್ಪತ್ರೆಗಳನ್ನು ಯೋಜನೆಯಡಿ ನೋಂದಾಯಿಸಿ ಅಧಿಸೂಚಿಸುವ ಕಾರ್ಯವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದಲೇ ಕೈಗೊಳ್ಳತಕ್ಕದ್ದು ಎಂದು ಆದೇಶಿಸಲಾಗಿರುತ್ತದೆ.
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ಕ್ರಮವಾಗಿ 186 ಮತ್ತು 70 ಖಾಸಗಿ ಆಸ್ಪತ್ರೆಗಳನ್ನು ನೋಂದಾವಣೆಗೊಳಿಸಿ ಆದೇಶಿಸಲಾಗಿದೆ. ಸದರಿ ಯೋಜನೆಯಡಿ ನೋಂದಾವಣೆಗೊಳ್ಳಲು ಇಚ್ಛೆ ವ್ಯಕ್ತಪಡಿಸುವ ಖಾಸಗಿ ಆಸ್ಪತ್ರೆಗಳು ಹೊಂದಿರಬೇಕಾದ ಮೂಲ ಸೌಕರ್ಯ ಹಾಗೂ ಇತರೆ ಮಾನದಂಡಗಳನ್ನು ಪರಿಶೀಲಿಸಿಕೊಂಡು ಆಸ್ಪತ್ರೆಗಳನ್ನು ಅಧಿಸೂಚಿಸಲು ಪ್ರಸ್ತುತ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗತ್ತಿದ್ದು, ಆಡಳಿತಾತ್ಮಕ ಹಿತದೃಷ್ಟಿಯಿಂದ ಹಾಗೂ ತ್ವರಿತವಾಗಿ ಯೋಜನೆಯನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದ ಸದರಿ ಯೋಜನೆಯಡಿ ಆಸ್ಪತ್ರೆಗಳನ್ನು ನೋಂದಾವಣೆಗೊಳಿಸುವ ಅಧಿಕಾರವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ಗೆ ಪ್ರತ್ಯಾಯೋಜಿಸಲು ತೀರ್ಮಾನಿಸಿ ಸರ್ಕಾರವು ಆದೇಶಿಸಿದೆ.
**
: ದಿನಾಂಕ 29.10.2025ರ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ನೋಂದಾವಣೆಗೊಳ್ಳಲು ಇಚ್ಛೆ ವ್ಯಕ್ತಪಡಿಸುವ ಖಾಸಗಿ ಆಸ್ಪತ್ರೆಗಳು ಹೊಂದಿರಬೇಕಾದ ಮೂಲ ಸೌಕರ್ಯ ಹಾಗೂ ಇತರೆ ಮಾನದಂಡಗಳನ್ನು ಪರಿಶೀಲಿಸಿಕೊಂಡು ಆಸ್ಪತ್ರೆಗಳನ್ನು ನೋಂದಾವಣೆಗೊಳಿಸಿ ಅಧಿಸೂಚಿಸುವ ಅಧಿಕಾರವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ಗೆ ಪ್ರತ್ಯಾಯೋಜಿಸಿ ಆದೇಶಿಸಲಾಗಿದೆ
.
**ಯೋಜನೆಗೆ ಸರ್ಕಾರಿ ನೌಕರರು ಅರ್ಜಿ ತುಂಬಲು ಸೂಚನೆಗಳು**
ಸರ್ಕಾರಿ ನೌಕರರು ಚಿಕಿತ್ಸೆ ಪಡೆಯಲು ಯೋಜನೆಗೆ ಒಳಪಟ್ಟ ಆಸ್ಪತ್ರೆಗೆ ಹೋದಾಗ ಜ್ಯೋತಿ ಸಂಜೀವಿನಿ ಯೋಜನೆಯಲ್ಲಿ ನಮೂದಾಗಿರುವ ಎಲ್ಲಾ ಅವಲಂಬಿತರ ಹೆಸರು ಮತ್ತು ಭಾವಚಿತ್ರಗಳು ಗೋಚರಿಸುತ್ತವೆ. ಈ ಯೋಜನೆಗೆ ಒಳಪಡದಿದ್ದರೆ ಬರೀ ನೌಕರರ ಹೆಸರು ಮಾತ್ರ ಆಸ್ಪತ್ರೆಯ ವೆಬ್ಸೈಟ್ನಲ್ಲಿ ಗೋಚರಿಸುವುದರಿಂದ ಅವಲಂಬಿತರಿಗೆ ಚಿಕಿತ್ಸೆ ಕೊಡಿಸಲು ತೊಂದರೆಯಾಗುತ್ತದೆ.
