ಶ್ಲೋಕ – 31
ಸರ್ವಭೂತಸ್ಥಿತಂ ಯೋ ಮಾಂ ಭಜತ್ಯೇಕತ್ವಮಾಸ್ಥಿತಃ ।
ಸರ್ವಥಾ ವರ್ತಮಾನೋSಪಿ ಸ ಯೋಗೀ ಮಯಿ ವರ್ತತೇ
ಎಲ್ಲಾ ಜೀವಿಗಳಲ್ಲಿರುವ ನನ್ನನ್ನು ಏಕರೀತಿಯಿಂದ ತಿಳಿದು ಪೂಜಿಸುವವನು ಯಾವ ಸ್ಥಿತಿಯಲ್ಲಿದ್ದರೂ ನನ್ನಲ್ಲಿ ಇರುತ್ತಾನೆ.
ಕೃಷ್ಣ ಹೇಳುತ್ತಾನೆ “ಸರ್ವಗತನಾದ ಭಗವಂತ ಎಲ್ಲ ಕಡೆ ಏಕರೂಪವಾಗಿದ್ದಾನೆ ಎನ್ನುವ ಅನುಸಂಧಾನ ಮತ್ತು ನಿರಂತರ ಭಕ್ತಿ ಇರುವ ಸಾಧಕ, ಆತ ಹೇಗೇ ಇರಲಿ, ಅವನು ನನ್ನನ್ನು ಸೇರುವುದು ನಿಶ್ಚಿತ” ಎಂದು. ಅಪರೋಕ್ಷ ಜ್ಞಾನ ಪಡೆದವ ಭಗವಂತನಿಂದ ಎಂದೂ ದೂರ ಸರಿಯುವುದಿಲ್ಲ. ಆತ ಮೋಕ್ಷವನ್ನು ಪಡೆದು ಭಗವಂತನಲ್ಲಿ ನೆಲೆಸುತ್ತಾನೆ.

[…] ಭಗವದ್ಗೀತೆ – ಅಧ್ಯಾಯ-6, ಶ್ಲೋಕ – 31 […]