ಕೆ.ಆರ್.ಪೇಟೆ : ಇತ್ತೀಚೆಗೆ ನಡೆದ ಮಂಡ್ಯ ಡಿಸಿಸಿ ಬ್ಯಾಂಕ್ ನಿರ್ದೇಶಕರ ಜಿದ್ದ ಜಿದ್ದಿ ಚುನಾವಣೆಯಲ್ಲಿ ಆಯ್ಕೆಯಾಗಿರುವ ಶೀಳನೆರೆ ಅಂಬರೀಷ್ ಅವರನ್ನು ಕೆ.ಆರ್. ಪೇಟೆ ಪಟ್ಟಣದಲ್ಲಿರುವ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಉಪ ಕಚೇರಿಯ ಸಭಾಂಗಣದಲ್ಲಿ ಕಿಕ್ಕೇರಿ ಹೋಬಳಿಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹಿತೈಷಿಗಳು,ಬೆಂಬಲಿಗರು ಮೈಸೂರು ಪೇಟ ತೊಡಿಸಿ, ಹಾಕಿ, ಸಿಹಿ ತಿನ್ನಿಸಿ ಅಭಿನಂದಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಡಿಸಿಸಿ ಬ್ಯಾಂಕ್ ನಿರ್ದೇಶಕ ಶೀಳನೆರೆ ಅಂಬರೀಷ್ ಮೊದಲ ಬಾರಿಗೆ ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕರಾಗಿ ಆಯ್ಕೆ ಮಾಡಿದ ತಾಲ್ಲೂಕಿನ ಎಲ್ಲ ಪ್ರಾಥಮಿಕ ಕೃಷಿ ಸಹಕಾರ ಬ್ಯಾಂಕಿನ ಅಧ್ಯಕ್ಷರು, ಪದಾಧಿಕಾರಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.ನಮ್ಮ ಸರ್ವೋಚ್ಚನಾಯಕ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಮನ್ ಮುಲ್ ನಿರ್ದೇಶಕರಾದ ಡಾಲು ರವಿ,ಎಂ.ಬಿ ಹರೀಶ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರ ಸಹಕಾರದಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾನೆ. ನನ್ನ ರಾಜಕೀಯ ದಾರಿಯಲ್ಲಿ ಜಿ.ಪಂ ಉಪಾಧ್ಯಕ್ಷನಾಗಿ,ಮನ್ಮುಲ್ ನಿರ್ದೇಶಕರಾಗಿ ನನ್ನ ಆತ್ಮಕ್ಕೆ ತೃಪ್ತಿಯಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದೇನೆ. ಆ ಮಾದರಿಯಲ್ಲೇ ಎಂಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿದ್ದೇನೆ.ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ತಂದು ಸಹಕಾರ ಸಂಘಗಳ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮನ್ ಮುಲ್ ನಿರ್ದೇಶಕ ಎಂ.ಬಿ ಹರೀಶ್, ರಾಜ್ಯ ಮಾರಾಟ ಮಹಾಮಂಡಳಿಯ ನಿರ್ದೇಶಕ ಹಾಗೂ ಟಿ ಎ ಪಿ ಸಿ ಎಂ ಎಸ್ ನೂತನ ನಿರ್ದೇಶಕ ಶೀಳ ನೆರೆ ಅಂಬರೀಷ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮನ್ಮುಲ್ ಉಪ ವ್ಯವಸ್ಥಾಪಕ ಪ್ರಸಾದ್ ಮಾರ್ಗ ವಿಸ್ತರಣಾಧಿಕಾರಿ ನಾಗಪ್ಪ ಅಲ್ಲಿಬಾದಿ, ಬಿ ಸಿ ಮಧು, ರಾಘವೇಂದ್ರ, ಸಂಧ್ಯಾ, ಕಾಳಿ ಪತ್ತಿನ ಸಂಘದ ಮಾಜಿ ಅಧ್ಯಕ್ಷ ಜವರೇಗೌಡ,ರಾಮನಹಳ್ಳಿ ಡೈರಿ ಕಾರ್ಯದರ್ಶಿ ಕುಮಾರ್,ಮಾರ್ಗೋನಹಳ್ಳಿ ಜವರೇಗೌಡ, ತೇಗನಹಳ್ಳಿ ನಾಗೇಶ್,ಅಣ್ಣೇಚಾಕನಹಳ್ಳಿ ಡೈರಿ ಯೋಗೇಶ್,ಶೆಟ್ಟಹಳ್ಳಿ,ನಂಜಪ್ಪ,ಸೇರಿದಂತೆ ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
