ಕೊರಟಗೆರೆ :- ಗ್ರಾಮೀಣ ಪ್ರದೇಶದ ಗ್ರಂಥಾಲಯ ಮೇಲ್ವಿಚಾರಕರು ಎರೆಹುಳು ರೀತಿ ಕೆಲಸ ಮಾಡಿದರೆ ನೂರಾರು ಯುವಕರ ಪ್ರತಿಭೆ ಹೊರಬರಲು ಸಾಧ್ಯ ಎಂದು ಕೊರಟಗೆರೆ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸುನಿಲ್ ಅಭಿಪ್ರಾಯಪಟ್ಟರು.
ಅವರು ತಾಲ್ಲೂಕಿನ ಸಿ.ಎನ್. ದುರ್ಗ ಹೋಬಳಿ ಜಟ್ಟಿ ಅಗ್ರಹಾರದಲ್ಲಿ ನಡೆದ ತಾಲ್ಲೂಕು ಮಟ್ಟದ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ಉದ್ದೇಶಿಸಿ ವಿದ್ಯಾರ್ಥಿಗಳು ಪ್ರತಿನಿತ್ಯ ಗ್ರಂಥಾಲಯಕ್ಕೆ ಬಂದು ದಿನ ಪತ್ರಿಕೆ, ಪುಸ್ತಕಗಳನ್ನು ಓದುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ತಾಲ್ಲೂಕು ಮಟ್ಟದ ಗ್ರಂಥಾಲಯ ಸಪ್ತಾಹದಲ್ಲಿ ಗ್ರಂಥಾಲಯ ಮೇಲ್ವಿಚಾರಕ ಪುಟ್ಟಹನುಮಂತರಾಯಪ್ಪ ಅವರಿಗೆ ‘ಉತ್ತಮ ಗ್ರಂಥಪಾಲಕ’ ಪ್ರಶಸ್ತಿ ನೀಡಿ ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ದಯಾನಂದ ಸ್ವಾಮಿ ಪಿ.ಎಚ್ ,ಗ್ರಾ.ಪಂ ಅಧ್ಯಕ್ಷ ಸಿ.ಡಿ.ಪ್ರಭಾಕರ,ಉಪಾಧ್ಯಕ್ಷೆ ಸರಸ್ವತಮ್ಮ, ಬಸವರಾಜು, ವಿನುತಾ, ಪಂಚಾಯಿತಿ ಕಾರ್ಯದರ್ಶಿ ಮುನಿಯಯ್ಯ, ಟಿ.ಎಲ್. ಸಿದ್ಧಗಂಗಣ್ಣ ಭಾಗವಹಿಸಿದ್ದರು.
