ಚನ್ನರಾಯಪಟ್ಟಣ: ಶ್ರವಣಬೆಳಗೊಳ ಹೋಬಳಿ ಕಬ್ಬಾಳು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮಹತ್ವದ ಆಘಾತ ಉಂಟಾಗಿದೆ. ಗ್ರಾಮದ ಪ್ರಮುಖ ಮುಖಂಡರಾದ ಸುರೇಶ್, ನಾಗರಾಜು, ಪ್ರಕಾಶ್, ಮಲ್ಲೇಶ್, ಉಮೇಶ್, ಲೋಕೇಶ್, ರವಿ, ಮಂಜೇಗೌಡ, ಕೆ.ಸಿ. ಸುರೇಶ್, ಮಂಜುನಾಥ್ ಸೇರಿದಂತೆ ಅನೇಕರು ಕಾಂಗ್ರೆಸ್ ತೊರೆದು, ಬಿಜೆಪಿ ನಾಯಕ ಚಿದಾನಂದ್ ಸಿ.ಆರ್ ಅವರ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಧ್ವಜ ಹಿಡಿದ ಮುಖಂಡರಿಗೆ ಪಕ್ಷದ ಪಟ ನೀಡುವ ಮೂಲಕ ಅವರನ್ನು ಗೌರವಪೂರ್ವಕವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಕಾಂಗ್ರೆಸ್ ತೊರೆದ ನಾಯಕರಿಗೆ ಬಿಜೆಪಿ ಪದಾಧಿಕಾರಿಗಳು ಹಾಗೂ ಸ್ಥಳೀಯ ಕಾರ್ಯಕರ್ತರು ಸ್ವಾಗತ ಕೋರಿದರು.

ಬಿಜೆಪಿಗೆ ಸೇರ್ಪಡೆಗೊಂಡ ಮುಖಂಡರು ಮಾತನಾಡಿ,
“ಗ್ರಾಮದ ಅಭಿವೃದ್ಧಿಗಾಗಿ ಹಾಗೂ ಜನಪರ ಹೋರಾಟಕ್ಕೆ ಬದ್ಧವಾಗಿರುವ ಪಕ್ಷ ನಮ್ಮನ್ನು ಹೆಚ್ಚು ಆಕರ್ಷಿಸಿದೆ. ಕಾಂಗ್ರೆಸ್ನಲ್ಲಿ ನಮ್ಮ ಪ್ರಶ್ನೆಗಳಿಗೆ ಉತ್ತರ ಇರಲಿಲ್ಲ. ಜನರ ಸಮಸ್ಯೆಗೆ ಪರಿಹಾರ ನೀಡುವ ದೃಷ್ಟಿಯಿಂದ ಬಿಜೆಪಿ ಸೂಕ್ತ ವೇದಿಕೆ” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಚಿದಾನಂದ್ ಸಿ.ಆರ್ ಅವರು,
“ಗ್ರಾಮೀಣ ಮಟ್ಟದಿಂದಲೇ ಪಕ್ಷವನ್ನು ಬಲಪಡಿಸುವ ಕಾರ್ಯ ಮುಂದುವರಿಯಲಿದೆ. ಕಬ್ಬಾಳು ಗ್ರಾಮದ ಮುಖಂಡರ ಸೇರ್ಪಡೆ ಬಿಜೆಪಿ ಸಂಘಟನೆಯನ್ನು ಇನ್ನಷ್ಟು ಶಕ್ತಗೊಳಿಸುತ್ತದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಲವಾರು ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
– ಮಂಜುನಾಥ್ ಐ ಕೆ
