ಕೆ.ಆರ್.ಪೇಟೆ,ನ.25: ಜೆಡಿಎಸ್ ಪಕ್ಷದ ಮುಖಂಡರು ಎಂದು ಹೇಳಿಕೊಂಡು ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿರುವವರ ವಿರುದ್ಧ ಕ್ರಮ ಜರುಗಿಸುವಂತೆ ತಾಲ್ಲೂಕು ಜೆಡಿಎಸ್ ಪಕ್ಷದ ಹಲವು ಮುಖಂಡರು ರಾಜ್ಯ ಜೆಡಿಎಸ್ ವರಿಷ್ಠರನ್ನು ಹಾಗೂ ಕ್ಷೇತ್ರದ ಶಾಸಕ ಹೆಚ್.ಟಿ.ಮಂಜು ಅವರನ್ನು ಒತ್ತಾಯ ಮಾಡಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ತಾಲ್ಲೂಕು ಜನತಾದಳ(ಎಸ್) ಪಕ್ಷದ ಕಾರ್ಯಾಧ್ಯಕ್ಷ ಬಿ.ಎಂ.ರಾಮಚಂದ್ರನ್, ಜಿಲ್ಲಾ ದಿಶಾ ಸಮಿತಿ ಸದಸ್ಯ ನರಸನಾಯಕ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಬೂಕನಕೆರೆ ಹೆಳವೇಗೌಡ, ಐಕನಹಳ್ಳಿ ಕೃಷ್ಣೇಗೌಡ, ಚಿಕ್ಕಗಾಡಿಗನಹಳ್ಳಿ ಸೋಮಶೇಖರ್, ತಾಲ್ಲೂಕು ಟಿಎಪಿಸಿಎಂಎಸ್ ಪರಾಜಿತ ಜೆಡಿಎಸ್ ಅಭ್ಯರ್ಥಿಗಳಾದ ಕುರುಬಹಳ್ಳಿ ನಾಗೇಶ್, ಆಲಂಬಾಡಿ ಕರಿಶೆಟ್ಟಿ, ಮಾಂಬಹಳ್ಳಿ ಕಾಂತರಾಜು, ಜೆಡಿಎಸ್ ಮುಖಂಡರಾದ ಬೇಲದಕೆರೆ ನಂಜಪ್ಪ, ಭೈರಾಪುರ ಹರೀಶ್, ಮುದುಗೆರೆ ನಾಗೇಶ್, ಗಂಜಿಗೆರೆ ರಾಮಕೃಷ್ಣೇಗೌಡ, ಹೆಮ್ಮಡಹಳ್ಳಿ ರಾಮೇಗೌಡ ಸೇರಿದಂತೆ ಹಲವು ಜೆಡಿಎಸ್ ಮುಖಂಡರು ಕ್ಷೇತ್ರದ ಶಾಸಕರಾದ ಹೆಚ್.ಟಿ.ಮಂಜು ಅವರು ಶೀಘ್ರವೇ ಜೆಡಿಎಸ್ ಕಾರ್ಯಕರ್ತರ ಸಭೆ ಕರೆದು, ಪಕ್ಷ ವಿರೋಧಿ ಚಟುವಟಿಕೆಗಳನ್ನು ಮಾಡಿ, ಮೊನ್ನೆ ನಡೆದ ಪಕ್ಷದ ಬೆಳ್ಳಿ ಹಬ್ಬದ ಸಮಾರಂಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರೆಂದು ಭಾಗವಹಿಸುವ ಮೂಲಕ ಜೆಡಿಎಸ್ ಮುಖಂಡರೆಂದು ಬಿಂಬಿಸಿಕೊಳ್ಳುತ್ತಿರುವ ಈ ವ್ಯಕ್ತಿಗಳು ಡಿಸಿಸಿ ಬ್ಯಾಂಕ್, ಮನ್ಮುಲ್ ಹಾಗು ಟಿಎಪಿಸಿಎಂಎಸ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡಿ ನಮ್ಮ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಸೋಲಿಗೆ ಕಾರಣವಾಗಿದ್ದಾರೆ. ಹಾಗಾಗಿ ಇವರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ಪಕ್ಷದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿರುವವರ ಇವರನ್ನು ಪಕ್ಷದಿಂದ ಉಚ್ಚಾಟಿಸಿ ಗೊಂದಲಕ್ಕೆ ತರೆ ಎಳೆಯಬೇಕು.

ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಹಾಗೂ ಎಂಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮಾಡಿರುವ ಹಲವು ಪೋಟೋ ಹಾಗೂ ವಿಡಿಯೋ ದಾಖಲೆಗಳನ್ನು ಇದ್ದು ಇದರ ಆಧಾರದ ಮೇಲೆ ಪಕ್ಷದಿಂದ ಉಚ್ಚಾಟನೆ ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಪಕ್ಷ ವಿರೋಧಿಗಳ ಬಗ್ಗೆ ಯಾರಿಂದಲೂ ಯಾವುದೇ ಒತ್ತಡಕ್ಕೆ ಮಣಿಯದೇ ಮೆದು ಧೋರಣೆ ತಳೆಯಬಾರದು. ಪಕ್ಷದಿಂದ ಹೊರ ಹಾಕಲು ಖಡಕ್ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂಬರುವ ಜಿ.ಪಂ, ತಾ.ಪಂ, ಗ್ರಾ.ಪಂ. ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಸೋಲಿಸಲು ನಮ್ಮ ಪಕ್ಷದೊಳಗೆ ಇದ್ದುಕೊಂಡು ಸಂಚು ರೂಪಿಸುತ್ತಾರೆ ದಯಮಾಡಿ ಆದಷ್ಟು ಬೇಗ ಪಕ್ಷದ ಕಾರ್ಯಕರ್ತರ ಸಭೆ ಕರೆದು ಪಕ್ಷ ವಿರೋಧಿಗಳನ್ನು ಜೆಡಿಎಸ್ ಪಕ್ಷದಿಂದ ಹೊರ ಹಾಕಲು ಸೂಕ್ತ ಖಡಕ್ ನಿರ್ಧಾರ ಕೈಗೊಳ್ಳಬೇಕು ಎಂದು ಜೆಡಿಎಸ್ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹೆಚ್.ಟಿ.ಮಂಜು ಅವರನ್ನು ಒತ್ತಾಯ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಗಂಜಿಗೆರೆ ಸೊಸೈಟಿ ಅಧ್ಯಕ್ಷರು ಹಾಗು ವಕೀಲ ಕುರುಬಹಳ್ಳಿ ಬಿ.ನಾಗೇಶ್, ದಿಶಾ ಸಮಿತಿ ಸದಸ್ಯ ನರಸನಾಯಕ್, ತಾಲ್ಲೂಕು ಜೆಡಿಎಸ್ ರೈತ ಮೋರ್ಚ ಅಧ್ಯಕ್ಷ ಹುಲ್ಲೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಬಲ್ಲೇನಹಳ್ಳಿ ರಾಮಚಂದ್ರನ್, ತಾ.ಪಂ.ಮಾಜಿ ಸದಸ್ಯ ಐಕನಹಳ್ಳಿ ಕೃಷ್ಣೇಗೌಡ, ಚಿಕ್ಕ ಗಾಡಿಗನಹಳ್ಳಿ ಸೋಮಶೇಖರ್, ಮಾಂಬಳ್ಳಿ ಸೊಸೈಟಿ ಅಧ್ಯಕ್ಷ ಕಾಂತರಾಜು, ಜೆಡಿಎಸ್ ಮುಖಂಡರಾದ ಬೇಲದಕೆರೆ ನಂಜೇಗೌಡ, ಆಲಂಬಾಡಿಕಾವಲು ಸೊಸೈಟಿ ನಿರ್ದೇಶಕ ಕರಿಶೆಟ್ಟಿ, ಬೈರಾಪುರ ಹರೀಶ್,ಮುದುಗೆರೆ ನಾಗೇಶ್, ಗಂಜಿಗೆರೆ ರಾಮಕೃಷ್ಣೇಗೌಡ, ಹೆಮ್ಮಡಹಳ್ಳಿ ರಾಮೇಗೌಡ, ಚಟ್ಟೇನಹಳ್ಳಿ ದೀಪು ಸೇರಿದಂತೆ ಹಲವು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.
