
ಹಾಸನ : ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಾರಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿ ಘಾಟಿಯ ರಾಜಕಟ್ಟೆ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.
ಮಂಗಳೂರಿನಿಂದ ಹಾಸನ ಕಡೆಗೆ ಕಲ್ಲಿದ್ದಲ್ಲನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಳಗೆ ರಾಜಕಟ್ಟೆ ಎಂಬಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಶಾರ್ಟ್ ಸಕ್ರ್ಯೂಟ್ ಘಟನೆಗೆ ಕಾರಣವೆನ್ನಲಾಗಿದೆ. ಲಾರಿಯು ಭಾಗಶಃ ಸುಟ್ಟು ಹೋಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ .