ಚನ್ನರಾಯಪಟ್ಟಣ: ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ ನೌಕರರ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಸ್ ಎನ್ ನಾಗೇಗೌಡ ಅವಿರೋಧವಾಗಿ ಆಯ್ಕೆಗೊಂಡಿದ್ದರು.

ಅಧ್ಯಕ್ಷರಾದ ನಾಗೇಗೌಡ ಮಾತನಾಡಿ ನನ್ನನ್ನು ಅವಿರೋಧವಾಗಿ ಆಯ್ಕೆಯಾಗಲು ಕಾರಣಕರ್ತರಾದ ಶಾಸಕ ಸಿಎನ್ ಬಾಲಕೃಷ್ಣ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ ಎನ್ ಪುಟ್ಟಸ್ವಾಮಿಗೌಡರಿಗೆ ತುಂಬು ಹೃದಯದ ಧನ್ಯವಾದಗಳು ಸಲ್ಲಿಸುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ಶ್ರೀನಿವಾಸಪುರದ ಹೇಮಾವತಿ ಸಕ್ಕರೆ ಕಾರ್ಖಾನೆಯ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎಸ್ ಎನ್ ನಾಗೇಗೌಡ, ಉಪಾಧ್ಯಕ್ಷರಾದ ಓ ಎಸ್ ಮಂಜುನಾಥ್, ಕಾರ್ಯದರ್ಶಿಯಾದ ಧನಂಜಯ್, ನಿರ್ದೇಶಕರಾದ ವರದರಾಜು, ರಾಮೇಗೌಡ, ಗುಮಾಸ್ತ ದೇವರಾಜ್, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗನ್ನಿ ಕುಮಾರ್, ಸತೀಶ್, ಬಿ ದೇವರಾಜ್, ಎಸ್ಎನ್ ರಂಗೇಗೌಡ, ಎಸ್ ಎನ್ ಬಸವರಾಜು, ಸೇರಿದಂತೆ ಇತರರು ಹಾಜರಿದ್ದರು.
– ಮಂಜುನಾಥ್ ಐ.ಕೆ.
