ಶ್ಲೋಕ – 03
ಮನುಷ್ಯಾಣಾಂ ಸಹಸ್ರೇಷು ಕಶ್ಚಿದ್ ಯತತಿ ಸಿದ್ಧಯೇ ।
ಯತತಾಮಪಿ ಸಿದ್ಧಾನಾಂ ಕಶ್ಚಿನ್ಮಾಂ ವೇತ್ತಿ ತತ್ತ್ವತಃ
ಸಾವಿರಾರು ಮಂದಿಯಲ್ಲಿ ಯಾರೋ ಒಬ್ಬ ಸಿದ್ಧಿಗಾಗಿ ಪ್ರಯತ್ನಿಸುತ್ತಾನೆ. ಪ್ರಯತ್ನಿಸಿದವರಲ್ಲಿ, ಪ್ರಯತ್ನಿಸಿ ಗುರಿಮುಟ್ಟಿದವರಲ್ಲಿ ಯಾರೋ ಒಬ್ಬ ನನ್ನನ್ನು ಸರಿಯಾಗಿ ಅರಿತುಕೊಳ್ಳುತ್ತಾನೆ.
ಭಗವಂತನನ್ನು ಯಾರು ತಳಸ್ಪರ್ಶಿಯಾಗಿ ತಿಳಿಯಲು ಸಾಧ್ಯ? ಕೃಷ್ಣ ಹೇಳುತ್ತಾನೆ “ಸಾವಿರಾರು ಮಾನವರಲ್ಲಿ ಕೆಲವರು ಸಿದ್ಧಿಗಾಗಿ ಪ್ರಯತ್ನಿಸುತ್ತಾರೆ. ಈ ರೀತಿ ಯೋಗದಲ್ಲಿ ತೊಡಗಿಸಿಕೊಂಡು ಅದರಲ್ಲಿ ಗುರಿಮುಟ್ಟಿದ ಅನೇಕರಲ್ಲಿ, ‘ಒಬ್ಬನು ನನ್ನನ್ನು ನಿಜವಾಗಿ ಅರ್ಥ ಮಾಡಿಕೊಂಡಿದ್ದಾನೆ’ ಎಂದು ಹೇಳುವುದು ಕಷ್ಟ”. ಎಂದು. ಅಪರೋಕ್ಷ ಜ್ಞಾನದಲ್ಲಿ ಎತ್ತರಕ್ಕೇರಿದ ಸಿದ್ಧಪುರುಷರಲ್ಲೂ ಕೂಡಾ ಭಗವಂತನನ್ನು ತತ್ವತಃ ತಿಳಿದುಕೊಳ್ಳುವವರು ಬಹಳ ವಿರಳ.

[…] ಭಗವದ್ಗೀತೆ ಆಧ್ಯಾಯ -7 ಶ್ಲೋಕ-3 […]