ಚನ್ನರಾಯಪಟ್ಟಣ: ಡಾ. ಬಿ.ಆರ್. ಅಂಬೇಡ್ಕರ್ ಮಹಾಪರಿನಿಬ್ಬಾಣ ದಿನದ ಅಂಗವಾಗಿ ಪಟ್ಟಣದ ಡಾಕ್ಟರ್ ಅಂಬೇಡ್ಕರ್ ಸರ್ಕಲ್ನಲ್ಲಿ ವಿಶ್ವ ರತ್ನ ಬಾಬಾಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ನೆರವೇರಿಸಲಾಯಿತು. ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಎನ್. ಬಾಲಕೃಷ್ಣ ಕಾರ್ಯಕ್ರಮದಲ್ಲಿ ಮಾತನಾಡಿ,
“ಜಗತ್ತಿನ ಅನೇಕ ದೇಶಗಳಲ್ಲಿ ಇಂದು ಬಾಬಾಸಾಹೇಬರ ಪರಿನಿಬ್ಬಾಣ ಕಾರ್ಯಕ್ರಮಗಳನ್ನು ಆಯೋಜಿಸಿ ಗೌರವ ಸಲ್ಲಿಸಲಾಗುತ್ತಿದೆ. ಭಾರತದ ಯುವ ಪೀಳಿಗೆಗೆ ಅಂಬೇಡ್ಕರ್ ಅವರ ಹೋರಾಟ, ತತ್ವ, ಸಾಧನೆಗಳನ್ನು ಪರಿಚಯಿಸುವುದು ನಮ್ಮ ಜವಾಬ್ದಾರಿ” ಎಂದು ಹೇಳಿದರು.
ಮಿನಿ ವಿಧಾನಸೌಧದ ಮುಂಭಾಗದಲ್ಲಿರುವ ಬಾಬಾಸಾಹೇಬ್ ಅಂಬೇಡ್ಕರ್ ಕಂಚಿನ ಪ್ರತಿಮೆಯ ಲೋಕಾರ್ಪಣೆಗೆ ಶೀಘ್ರದಲ್ಲೇ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ಶಾಸಕರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಟಿಎಪಿಸಿಎಂಎಸ್ ಉಪಾಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾದ ಸಿ.ಜಿ. ಜಗದೀಶ್, ಮಾಜಿ ತಾಲೂಕು ಪಂಚಾಯತಿ ಸದಸ್ಯ ಪುಟ್ಟಸ್ವಾಮಿ, ಟಿಎಪಿಸಿಎಂಎಸ್ ನಿರ್ದೇಶಕ ರವಿಕುಮಾರ್, ದಲಿತ ಮುಖಂಡರಾದ ನಾಗೇಶ್, ವೆಂಕಟೇಶ್, ಕುಂದೂರು ರಾಜು, ರಂಗಪ್ಪ, ದಂಡಿಗನಹಳ್ಳಿ ರವಿ, ದೇವರಾಜು, ಮಂಜುನಾಥ್, ನವೀನ್, ಸಂತೋಷ್, ಬಾಲು, ರಾಮು ಸೇರಿದಂತೆ ಅನೇಕರು ಭಾಗವಹಿಸಿದ್ದರು.
– ಮಂಜುನಾಥ್ ಐ .ಕೆ
